ಮಂಗಳವಾರ, ಮೇ 18, 2021
30 °C

ಲಾರಿ– ಬೈಕ್ ಅಪಘಾತ: ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆ.ಆರ್.ಪುರ ಠಾಣೆ ವ್ಯಾಪ್ತಿಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸುಂದರ್ ಬಾಬು (30) ಎಂಬುವರು ಮೃತಪಟ್ಟಿದ್ದಾರೆ.

‘ಹೂಡಿ ಕಡೆಯಿಂದ ಅಯ್ಯಪ್ಪನಗರ ಕಡೆಗೆ ಹೋಗುವ ರಸ್ತೆಯಲ್ಲಿ ಶನಿವಾರ ರಾತ್ರಿ 10.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೈಕ್ ಹಿಂಬದಿ ಸವಾರ ಪ್ರೇಮನಾಥ್ ಗಾಯಗೊಂಡಿದ್ದು, ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಲಾರಿ ಹಾಗೂ ಬೈಕ್‌ ಒಂದೇ ಬದಿಯಲ್ಲಿ ಹೊರಟಿದ್ದವು. ಇದೇ ಸಂದರ್ಭದಲ್ಲೇ ಲಾರಿಗೆ ಬೈಕ್‌ ತಾಗಿತ್ತು. ರಸ್ತೆಯಲ್ಲಿ ಬೈಕ್ ಉರುಳಿ ಬಿದ್ದಿತ್ತು. ತೀವ್ರ ಗಾಯಗೊಂಡು ಸವಾರ ಸುಂದರ್‌ಬಾಬು ಸ್ಥಳದಲ್ಲೇ ಮೃತಪಟ್ಟಿದ್ದಾರೆ.’

‘ಲಾರಿ ಹಾಗೂ ಬೈಕ್‌ ಜಪ್ತಿ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದೂ ಪೊಲೀಸರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು