ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದಚಾರಿ ಸಾವು; ಆರೋಪಿ ಪತ್ತೆಗೆ 58 ದೃಶ್ಯ ಪರಿಶೀಲನೆ

Last Updated 10 ಅಕ್ಟೋಬರ್ 2021, 15:36 IST
ಅಕ್ಷರ ಗಾತ್ರ

ಬೆಂಗಳೂರು: ಕೆ.ಆರ್. ಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಅಪಘಾತವನ್ನುಂಟು ಮಾಡಿ ಪಾದಚಾರಿ ಸಾವಿಗೆ ಕಾರಣವಾಗಿದ್ದ ಆರೋಪಿಯನ್ನು 58 ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳ ಪರಿಶೀಲನೆಯಿಂದ ಪೊಲೀಸರು ಪತ್ತೆ ಮಾಡಿದ್ದಾರೆ.

‘ಕಸ್ತೂರಿನಗರ 2ನೇ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಅಪಘಾತ ಸಂಭವಿಸಿತ್ತು. ಪಾದಚಾರಿಗೆ ಕಾರು ಗುದ್ದಿಸಿದ್ದ ಚಾಲಕ, ಸ್ಥಳದಿಂದ ಪರಾರಿಯಾಗಿದ್ದ. ಗಾಯಗೊಂಡಿದ್ದ ಪಾದಚಾರಿಯನ್ನು ಸ್ಥಳೀಯರು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಪಾದಚಾರಿ ಮೃತಪಟ್ಟಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಅಪಘಾತದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು. ಆದರೆ, ಆರೋಪಿ ಯಾರೆಂದು ಮಾಹಿತಿ ಇರಲಿಲ್ಲ. ಘಟನಾ ಸ್ಥಳ ಹಾಗೂ ಸುತ್ತಮುತ್ತಲಿನ 58 ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಿ ಪರಿಶೀಲಿಸಲಾಯಿತು. ಕಾರು ಚಲಾಯಿಸಿದ್ದ ಆರೋಪಿ ಶ್ರೀಧರ್ ಎಂಬುವರ ಸುಳಿವು ಸಿಕ್ಕಿತ್ತು’ ಎಂದೂ ತಿಳಿಸಿವೆ.

‘ಎಚ್‌ಎಎಲ್‌ ನಿವೃತ್ತ ನೌಕರ ಶ್ರೀಧರ್, ಏರ್ಟಿಗಾ ಕಾರು ಚಲಾಯಿಸಿಕೊಂಡು ಹೊರಟಿದ್ದಾಗ ಅಪಘಾತವಾಗಿತ್ತು. ಪ್ರಕರಣದ ವಿಚಾರಣೆಗೆ ಬರುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು. ಬಂಧನದ ಭೀತಿಯಲ್ಲಿದ್ದ ಅವರು, ವಕೀಲರ ಮೂಲಕ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ. ಠಾಣೆಗೆ ವಿಚಾರಣೆಗೆ ಬಂದು ಹೇಳಿಕೆ ನೀಡಿದ್ದಾರೆ’ ಎಂದೂ ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT