ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಎಂಟಿಸಿ ಬಸ್ ಚಕ್ರ ಹರಿದು ಸವಾರ ಸಾವು

Published : 30 ಸೆಪ್ಟೆಂಬರ್ 2024, 15:52 IST
Last Updated : 30 ಸೆಪ್ಟೆಂಬರ್ 2024, 15:52 IST
ಫಾಲೋ ಮಾಡಿ
Comments

ಬೆಂಗಳೂರು: ಯಶವಂತಪುರದ ಸಿವಿ ರಾಮನ್‌ ರಸ್ತೆಯಲ್ಲಿ ಬಿಎಂಟಿಸಿ ಬಸ್‌ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿದ್ಯಾರಣ್ಯಪುರದ ನಿವಾಸಿ ಈಶ್ವರ್‌(43) ಮೃತಪಟ್ಟವರು.

‘ಈಶ್ವರ ಅವರು ಅಕ್ಕಸಾಲಿಗ ಕೆಲಸ ಮಾಡುತ್ತಿದ್ದರು. ಸೋಮವಾರ ಮಧ್ಯಾಹ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಕಾರೊಂದಕ್ಕೆ ಜಾಗ ಬಿಡುವ ಸಂದರ್ಭದಲ್ಲಿ ಆಯತಪ್ಪಿ ರಸ್ತೆಗೆ ಬಿದ್ದಿದ್ದರು. ಅದೇ ವೇಳೆ ಯಲಹಂಕದಿಂದ ಯಶವಂತಪುರಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ನ ಚಕ್ರಗಳು ಈಶ್ವರ್ ಅವರ ತಲೆಯ ಮೇಲೆ ಹರಿದು ಅವರು ಸ್ಥಳದಲ್ಲೇ ಮೃತಪಟ್ಟರು’ ಎಂದು ಪೊಲೀಸರು ಹೇಳಿದರು.

‘ಈಶ್ವರ್ ಅವರು ಧರಿಸಿದ್ದ ಹೆಲ್ಮೆಟ್‌ ಸಹ ಛಿದ್ರವಾಗಿತ್ತು’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

‘ಬಿಎಂಟಿಸಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿದೆ. ಚಾಲಕ ಮೋಹನ್‌ ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.

ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಯಶವಂತಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT