ಸೋಮವಾರ, ಮೇ 23, 2022
27 °C

ಅಪಘಾತ: ಬಿಬಿಎಂಪಿ ಲಾರಿ ಚಾಲಕ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಾಗಲೂರು ಬಳಿ ಸಂಭವಿಸಿದ್ದ ಅಪಘಾತದಲ್ಲಿ ರಾಮಯ್ಯ (76) ಎಂಬುವರು ಮೃತಪಟ್ಟ ಪ್ರಕರಣ ಸಂಬಂಧ, ಬಿಬಿಎಂಪಿ ಕಸ ಸಾಗಣೆ ಲಾರಿ ಚಾಲಕ ಆಂಜನಪ್ಪ ಅವರನ್ನು ಚಿಕ್ಕಜಾಲ ಸಂಚಾರ ಪೊಲೀಸರು ಬಂಧಿಸಿದ್ದಾರೆ.

‘ಸಂಪಿಗೆಹಳ್ಳಿ ನಿವಾಸಿ ರಾಮಯ್ಯ, ಸಂಬಂಧಿ ಯುವತಿಯೊಬ್ಬರಿಗೆ ಸಾತನೂರಿನಲ್ಲಿ ವರನನ್ನು ನೋಡಿಕೊಂಡು ದ್ವಿಚಕ್ರ ವಾಹನದಲ್ಲಿ ಮಾರ್ಚ್ 31ರಂದು ಮಧ್ಯಾಹ್ನ ಮನೆಗೆ ವಾಪಸು ಹೊರಟಿದ್ದರು. ಅವರ ವಾಹನಕ್ಕೆ ಬಿಬಿಎಂಪಿ ಕಸ ಸಾಗಣೆ ಲಾರಿ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡ ರಾಮಯ್ಯ ಮೃತಪಟ್ಟಿದ್ದರು’ ಎಂದು ಪೊಲೀಸರು ಹೇಳಿದರು.

‘ಬಿಬಿಎಂಪಿ ಲಾರಿ ಚಾಲಕನ ನಿರ್ಲಕ್ಷ್ಯ ಹಾಗೂ ಅತೀ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿತ್ತು. ರಾಮಯ್ಯ ಪುತ್ರ ರಾಜಶೇಖರ್ ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಪಘಾತದ ನಂತರ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದರು. ಕೆಲವರು ನೀಡಿದ್ದ ಸುಳಿವಿನ ಆಧಾರದಲ್ಲಿ ಆರೋಪಿ ಇದ್ದ ಸ್ಥಳವನ್ನು ಪತ್ತೆ ಮಾಡಿ ಅವರನ್ನು ಬಂಧಿಸಲಾಗಿದೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು