ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಅಪಘಾತ: ಬೈಕ್‌ ಸವಾರ ಸಾವು

Published 2 ಜುಲೈ 2024, 16:40 IST
Last Updated 2 ಜುಲೈ 2024, 16:40 IST
ಅಕ್ಷರ ಗಾತ್ರ

ಬೆಂಗಳೂರು: ಆರ್‌ಬಿಐ ಲೇಔಟ್‌ನಲ್ಲಿ ನಿಯಂತ್ರಣ ತಪ್ಪಿ ರಸ್ತೆಯ ಮೇಲೆ ಬಿದ್ದ ಬೈಕ್‌ ಸವಾರನ ತಲೆಯ ಮೇಲೆ ನೀರಿನ ಟ್ಯಾಂಕರ್ ವಾಹನದ ಚಕ್ರ ಹರಿದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪುಟ್ಟೇನಹಳ್ಳಿ ನಿವಾಸಿ ಕಿರಣ್‌(19) ಮೃತಪಟ್ಟವರು. ಮಂಡ್ಯ ಜಿಲ್ಲೆ, ಕೆ.ಆರ್‌.ಪೇಟೆಯ ಕಿರಣ್‌ ಅವರು ಆರ್‌ಬಿಐ ಲೇಔಟ್‌ನ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಬೆಳಿಗ್ಗೆ ಬೈಕ್‌ನಲ್ಲಿ ದಿನಸಿ ಸಾಮಗ್ರಿ ತರಲು ಅಂಗಡಿಗೆ ತೆರಳಿ ವಾಪಾಸ್‌ ಆಗುತ್ತಿದ್ದರು. ಆಗ ಅವಘಡ ಸಂಭವಿಸಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಘಟನೆ ಸಂಬಂಧ ನೀರಿನ ಟ್ಯಾಂಕರ್ ವಾಹನವನ್ನು ಜಪ್ತಿ ಮಾಡಿಕೊಂಡು, ಚಾಲಕನ ವಿಚಾರಣೆ ನಡೆಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದರು.

ಕುಮಾರಸ್ವಾಮಿ ಲೇಔಟ್‌ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT