ಮಂಗಳವಾರ, ಡಿಸೆಂಬರ್ 1, 2020
19 °C

ವಾಹನ ಗುದ್ದಿ ಪಾದಚಾರಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಸವನಗುಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವಾಹನವೊಂದು ಗುದ್ದಿ ತೀವ್ರ ಗಾಯಗೊಂಡಿದ್ದ ಕಮಲಮ್ಮ (70) ಎಂಬುವರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

‘ಮೃತ ಕಮಲಮ್ಮ ಅವರ ವಿಳಾಸ ಹಾಗೂ ಸಂಬಂಧಿಕರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೃತದೇಹವನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಸಂಬಂಧಿಕರು ಯಾರಾದರೂ ಇದ್ದರೆ ಬಸವನಗುಡಿ ಸಂಚಾರ ಠಾಣೆ 080–22942668 ಸಂಪರ್ಕಿಸಬಹುದು’ ಎಂದು ಪೊಲೀಸರು ಹೇಳಿದರು.

‘ಅ. 27ರಂದು ಬೃಂದಾವನ ನಗರ ಜಿಂಕೆ ಪಾರ್ಕ್ ಬಳಿ ಕಮಲಮ್ಮ ಅವರು ರಸ್ತೆ ದಾಟುತ್ತಿದ್ದರು. ಅದೇ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಬಂದು ಅವರಿಗೆ ಗುದ್ದಿತ್ತು. ಸ್ಥಳದಲ್ಲೇ ಕುಸಿದು ಬಿದ್ದ ಅವರನ್ನು ಸ್ಥಳೀಯರು ಹಾಗೂ ಮಹಿಳಾ ಕಾನ್‌ಸ್ಟೆಬಲೊಬ್ಬರು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಅವರು ಅ. 29ರಂದು ತೀರಿಕೊಂಡಿದ್ದಾರೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು