ಮಂಗಳವಾರ, ಏಪ್ರಿಲ್ 20, 2021
25 °C

ಬಿಎಂಟಿಸಿ ಬಸ್– ಬೈಕ್ ಅಪಘಾತ; ಕಾನ್‌ಸ್ಟೆಬಲ್ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬ್ಯಾಡರಹಳ್ಳಿ ಬಳಿ ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಗುರುವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಕಾನ್‌ಸ್ಟೆಬಲ್ ರಾಮಾಚಾರಿ (47) ಮೃತಪಟ್ಟಿದ್ದಾರೆ.

‘ನಗರದ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ರಾಮಾಚಾರಿ ಅವರು ಬೈಕ್‌ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಬೈಕ್‌ಗೆ ಬಸ್‌ ಗುದ್ದಿತ್ತು. ಬಸ್ಸಿನ ಹಿಂದಿನ ಚಕ್ರವು ಬೈಕ್ ಹಾಗೂ ಸವಾರ ರಾಮಾಚಾರಿ ಮೇಲೆಯೇ ಹರಿದು ಹೋಗಿದೆ. ತೀವ್ರ ಗಾಯಗೊಂಡು ರಾಮಾಚಾರಿ ಮೃತಪಟ್ಟಿದ್ದಾರೆ’ ಎಂದೂ ತಿಳಿಸಿದೆ.

ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ, ‘ಕರ್ತವ್ಯದ ವೇಳೆಯಲ್ಲೇ ರಾಮಾಚಾರಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬ್ಯಾಡರಹಳ್ಳಿ ಪೊಲೀಸರು ತನಿಖೆ ಆರಂಭಿಸಿದ್ದಾರೆ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು