ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫುಟ್‌ಬಾಲ್ ಆಟಗಾರ ಸಾವು: ಲಾರಿ ಚಾಲಕ ಬಂಧನ

Published 13 ಫೆಬ್ರುವರಿ 2024, 22:36 IST
Last Updated 13 ಫೆಬ್ರುವರಿ 2024, 22:36 IST
ಅಕ್ಷರ ಗಾತ್ರ

ಬೆಂಗಳೂರು: ಕೆ.ಆರ್‌.ಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಅಪಘಾತವನ್ನುಂಟು ಮಾಡಿ ರಾಜ್ಯಮಟ್ಟದ ಫುಟ್‌ಬಾಲ್ ಆಟಗಾರ ಕೆ. ಮೊನೀಶ್ (27) ಸಾವಿಗೆ ಕಾರಣವಾಗಿದ್ದ ಆರೋಪದಡಿ ಮಂಜುನಾಥ್ (29) ಅವರನ್ನು ಪೊಲೀಸರು ಬಂಧಿಸಿದ್ದಾರೆ.

‘ವಿಜಯಪುರದ ಮಂಜುನಾಥ್, ಲಾರಿ ಚಾಲಕ. ಅಪಘಾತದ ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು ಇತ್ತೀಚೆಗೆ ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸ್ಥಳೀಯ ನಿವಾಸಿಯಾದ ಕೆ. ಮೊನೀಶ್, ಜ.21ರಂದು ತಡರಾತ್ರಿ ರಾಮಮೂರ್ತಿ ನಗರ ಮೇಲ್ಸೇತುವೆ ಬಳಿ ಬೈಕ್‌ನಲ್ಲಿ ಹೊರಟಿದ್ದರು. ಇದೇ ಮಾರ್ಗವಾಗಿ ತೆರಳುತ್ತಿದ್ದ ಮಂಜುನಾಥ್, ಅತೀ ವೇಗದಲ್ಲಿ ನಿರ್ಲಕ್ಷ್ಯದಿಂದ ಲಾರಿ ಚಲಾಯಿಸಿದ್ದರು. ಇದರಿಂದಾಗಿ ಲಾರಿ, ಬೈಕ್‌ಗೆ ಡಿಕ್ಕಿ ಹೊಡೆದಿತ್ತು’ ಎಂದರು.

‘ಅಪಘಾತದ ಬಳಿಕ ಮಂಜುನಾಥ್ ಸ್ಥಳದಿಂದ ಪರಾರಿಯಾಗಿದ್ದ. ತೀವ್ರ ಗಾಯಗೊಂಡಿದ್ದ ಮೊನೀಶ್‌ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದರು. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿಯನ್ನು ವಿಜಯಪುರದಲ್ಲಿ ಬಂಧಿಸಿ ನಗರಕ್ಕೆ ಕರೆತರಲಾಯಿತು’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT