ಬೆಂಗಳೂರು: ಹೆಣ್ಣೂರು, ಮಹದೇವಪುರ ಹಾಗೂ ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಕಡೆ ಶನಿವಾರ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಅಕ್ಕ–ತಂಗಿ, ಕಂಪನಿಯೊಂದರ ವ್ಯವಸ್ಥಾಪಕ ಹಾಗೂ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಯುವಕ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಹೆಣ್ಣೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರ ಮುಖ್ಯರಸ್ತೆಯ ಸರಾಯಿಪಾಳ್ಯದ ಬಳಿ ಬಿಬಿಎಂಪಿಗೆ ಸೇರಿದ ಕಸ ತುಂಬಿಸುವ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಅಕ್ಕ–ತಂಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗೋವಿಂದಪುರದ ನಿವಾಸಿಗಳಾದ ನಿಗಾರ್ ಸುಲ್ತಾನಾ (32) ಹಾಗೂ ನಿಗಾರ್ ಇರ್ಫಾನಾ (30) ಮೃತಪಟ್ಟವರು. ಇಬ್ಬರಿಗೂ ಮದುವೆ ಆಗಿತ್ತು. ಕೆಲಸದ ನಿಮಿತ್ತ ಸಹೋದರಿಯರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಆಗ ಅಪಘಾತ ಸಂಭವಿಸಿದೆ ಎಂದು ಸಂಚಾರ ಪೊಲೀಸರು ತಿಳಿಸಿದರು.

‘ಸಹೋದರಿಯರು ಗೋವಿಂದಪುರದಿಂದ ಥಣಿಸಂದ್ರದ ಮಾರ್ಗವಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಮುಂದೆ ಸಾಗುತ್ತಿದ್ದ ಕಾರಿನ ಚಾಲಕ ಏಕಾಏಕಿ ನಿಲ್ಲಿಸಿದ್ದ. ಇದರಿಂದ ಗಾಬರಿಗೊಂಡ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದವರು, ಬಲಕ್ಕೆ ತನ್ನ ವಾಹವನ್ನು ತಿರುಗಿಸಿದ್ದರು. ಅದೇ ಸಂದರ್ಭದಲ್ಲಿ ಹಿಂದಿನಿಂದ ವೇಗವಾಗಿ ಬಂದ ಬಿಬಿಎಂಪಿಗೆ ಸೇರಿದ ಕಸ ತುಂಬಿಸುವ ಲಾರಿ ಇವರ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಸಹೋದರಿಯಬ್ಬರು ನೆಲದ ಮೇಲೆ ಉರುಳಿದ್ದಾರೆ. ಬಳಿಕ ಚಾಲಕನ ನಿಯಂತ್ರಣಕ್ಕೆ ಸಿಗದೇ ಲಾರಿಯ ಚಕ್ರಗಳು ಅವರ ಮೇಲೆ ಹರಿದಿವೆ. ಪರಿಣಾಮ ಇಬ್ಬರೂ ಸಹ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಪ್ರತಿಭಟನೆ ನಡೆಸಿದರು. ತಕ್ಷಣವೇ ಲಾರಿ ಚಾಲಕ ಗಾದಿಲಿಂಗನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳ್ಳಾರಿ ಮೂಲದ ಗಾದಿಲಿಂಗನನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

‘ನನ್ನ ಹಿರಿಯ ಮಗನ ಜನ್ಮದಿನಕ್ಕೆ ಶಾಪಿಂಗ್ ಮಾಡಲು ಸಹೋದರಿಯರು ತೆರಳಿದ್ದರು. ನಂತರ, ಆಸ್ಪತ್ರೆಗೆ ಹೋಗಿ ಬರಲು ಹೊರಟಿದ್ದರು. ಮನೆಯಿಂದ ಬಂದ ಅರ್ಧಗಂಟೆಯಲ್ಲಿ ಅಪಘಾತವಾಗಿದೆ. ಚಾಲಕ ಮದ್ಯ ಸೇವಿಸಿ ಲಾರಿ ಚಲಾಯಿಸುತ್ತಿದ್ದ. ಚಾಲಕನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಮೃತ ನಿಗಾರ್ ಇರ್ಫಾನಾ ಪತಿ ಇಮ್ರಾನ್ ಸೈಯ್ಯದ್ ತಿಳಿಸಿದ್ದಾರೆ.

ಕ್ಯಾಂಟರ್ ಡಿಕ್ಕಿ: ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಕಂಪನಿ ವ್ಯವಸ್ಥಾಪಕ, ರಾಮಚಂದ್ರಪುರ ನಿವಾಸಿ ಮನೋಹರ್ ವಿನಾಯಕ್ ರೋಖೆಡೆ(42) ಮೃತಪಟ್ಟಿದ್ದಾರೆ.

‘ಮನೋಹರ್ ಅವರು ಶನಿವಾರ ಬೆಳಿಗ್ಗೆ 9.15ರ ಸುಮಾರಿಗೆ ತಮ್ಮ ಎಲೆಕ್ಟ್ರಿಕ್ ಬೈಕ್ನಲ್ಲಿ ಹೆಲ್ಮೆಟ್ ಧರಿಸಿಕೊಂಡು ಮನೆಯಿಂದ ದೇವನಹಳ್ಳಿ ಕಡೆ ಇರುವ ಕಚೇರಿಗೆ ತೆರಳುತ್ತಿದ್ದರು. ಹೆಬ್ಬಾಳ ಮೇಲ್ಸೇತುವೆಯಲ್ಲಿ ಹೋಗುವಾಗ ಹಿಂದಿನಿಂದ ವೇಗವಾಗಿ ಬಂದ ಕ್ಯಾಂಟರ್ ಚಾಲಕ, ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕೆಳಗೆ ಬಿದ್ದ ಮನೋಹರ್ ಮೈಮೇಲೆ ಕ್ಯಾಂಟರ್ ಚಕ್ರಗಳು ಹರಿದಿವೆ. ಕೂಡಲೇ ಸ್ಥಳೀಯರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಅವರು ಮೃತಪಟ್ಟಿದ್ದಾರೆ’ ಎಂದು ಸಂಚಾರ ಪೊಲೀಸರು ತಿಳಿಸಿದರು.

ಆರೋಪಿ ಕ್ಯಾಂಟರ್ ಚಾಲಕ ರಮೇಶ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ನೋಟಿಸ್ ಕೊಟ್ಟು ಕಳುಹಿಸಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ಮತ್ತೊಂದು ಪ್ರಕರಣದಲ್ಲಿ ವೇಗವಾಗಿ ಹೋಗುತ್ತಿದ್ದ ಬೈಕ್, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದುಕೊಂಡು ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಹದೇವಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಾರತ್ಹಳ್ಳಿ ನಿವಾಸಿ ವೀರೇಶ್(30) ಮೃತಪಟ್ಟವರು.

ಘಟನೆಯಲ್ಲಿ ಬೈಕ್ ಚಾಲಕ ಕುಂದಲಹಳ್ಳಿ ನಿವಾಸಿ ಜಗದೀಶ್ ಅವರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪುಡ್ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವೀರೇಶ್ ಮತ್ತು ಜಗದೀಶ್ ಶನಿವಾರ ಮುಂಜಾನೆ 4ರ ಸುಮಾರಿಗೆ ಚಿಕ್ಕಬಳ್ಳಾಪುರದ ನಂದಿಬೆಟ್ಟಕ್ಕೆ ಬೈಕ್ನಲ್ಲಿ ತೆರಳುತ್ತಿದ್ದರು. ಆಗ ಬೈಕ್ ನಿಯಂತ್ರಣ ತಪ್ಪಿ ಬಿಗ್ಬಜಾರ್ ಸಮೀಪದ ಸತ್ಯಸಾಯಿ ಬಸ್ ನಿಲ್ದಾಣ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ಮಹದೇವಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.