ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಪ್ರತ್ಯೇಕ ಅಪಘಾತ: ಇಬ್ಬರು ಸಾವು

Published 26 ಡಿಸೆಂಬರ್ 2023, 20:08 IST
Last Updated 26 ಡಿಸೆಂಬರ್ 2023, 20:08 IST
ಅಕ್ಷರ ಗಾತ್ರ

ಬೆಂಗಳೂರು: ಚಿಕ್ಕಪೇಟೆ ಹಾಗೂ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ವಿಶ್ವೇಶ್ವರಯ್ಯ ಬಡಾವಣೆಯ ನಿವಾಸಿ ಕುಮಾರ್ (32) ಹಾಗೂ ಓಕಳಿಪುರ ನಿವಾಸಿ ಸತೀಶ್ (40) ಮೃತರು. ಎರಡೂ ಅಪಘಾತ ಸಂಬಂಧ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

‘ಅಡುಗೆ ಕೆಲಸ ಮಾಡುತ್ತಿದ್ದ ಕುಮಾರ್ ಸೋಮವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಮುದ್ದಯ್ಯನಪಾಳ್ಯ ಮೂಲಕ ಹೊರಟಿದ್ದರು. ಇದೇ ಸಂದರ್ಭದಲ್ಲಿ ದ್ವಿಚಕ್ರ ವಾಹನಕ್ಕೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡು ಕುಮಾರ್ ಮೃತಪಟ್ಟಿದ್ದಾರೆ’ ಎಂದು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ತಿಳಿಸಿದರು.

‘ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಸತೀಶ್, ಸ್ನೇಹಿತನ ಜೊತೆ ದ್ವಿಚಕ್ರ ವಾಹನದಲ್ಲಿ ಮಂಗಳವಾರ ಬೆಳಿಗ್ಗೆ ಹೊರಟಿದ್ದರು. ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ದ್ವಿಚಕ್ರ ವಾಹನಕ್ಕೆ, ಲಾರಿ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡು ಸತೀಶ್ ಮೃತಪಟ್ಟಿದ್ದಾರೆ. ಸ್ನೇಹಿತ ಗಾಯೊಂಡಿದ್ದಾರೆ’ ಎಂದು ಚಿಕ್ಕಪೇಟೆ ಸಂಚಾರ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT