ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಅಪಘಾತ: ಸ್ಕೂಟರ್‌ ಸವಾರ ಸಾವು

Published 25 ಜೂನ್ 2024, 15:34 IST
Last Updated 25 ಜೂನ್ 2024, 15:34 IST
ಅಕ್ಷರ ಗಾತ್ರ

ಬೆಂಗಳೂರು: ಹೈಗ್ರೌಂಡ್ಸ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪಘಾತದಲ್ಲಿ ಸ್ಕೂಟರ್‌ ಸವಾರ ಬಿ.ಎಂ.ಮರಿಸ್ವಾಮಿ (53) ಮೃತಪಟ್ಟಿದ್ದಾರೆ.

‘ಸೋಮವಾರ ಬೆಳಿಗ್ಗೆ ಪಲ್ಲವಿ ಅವರು ಬಸವೇಶ್ವರ ಜಂಕ್ಷನ್ ಕಡೆಯಿಂದ ಹಳೇ ಹೈಗ್ರೌಂಡ್ಸ್ ಜಂಕ್ಷನ್‌ಗೆ ಕಡೆಗೆ ವೇಗವಾಗಿ ತಮ್ಮ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಅದೇ ವೇಳೆ ಪ್ರೆಸ್ಟೀಜ್ ಬಿಲ್ಡಿಂಗ್‌ ಗೇಟ್‌ ಮುಂಭಾಗ ಮರಿಸ್ವಾಮಿ ಅವರು ಸ್ಕೂಟರ್‌ನಲ್ಲಿ ಹೋಗುತ್ತಿದ್ದರು. ಆಗ ಎರಡು ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿ ಮರಿಸ್ವಾಮಿ ಅವರು, ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಅವರು ಮೃತಪಟ್ಟರು’ ಎಂದು ಸಂಚಾರ ಪೊಲೀಸರು ಹೇಳಿದರು.

‘ಅಪಘಾತಕ್ಕೆ ಪಲ್ಲವಿ ಅವರೇ ಕಾರಣವೆಂದು ದೂರು ನೀಡಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು‘ ಎಂದು ಸಂಚಾರ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT