ಬೆಂಗಳೂರು: ಆಟೊವೊಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ನಂಜುಂಡಸ್ವಾಮಿ (29) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರಿಂಗ್ ರಸ್ತೆಯ ರಾಜ್‌ಕುಮಾರ್ ಸ್ಮಾರಕ ಬಳಿ ಏಕಮುಖ ಸಂಚಾರದಲ್ಲಿ ಮಂಗಳವಾರ ಮಧ್ಯರಾತ್ರಿ ಆಟೊ ವೇಗವಾಗಿ ಚಲಿಸುತ್ತಿತ್ತು. ವಿಭಜಕಕ್ಕೆ ಡಿಕ್ಕಿಯಾಗಿದ್ದರಿಂದ ಚಾಲಕನ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟರು. ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.