ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಉರುಳಿಬಿದ್ದ ತರಕಾರಿ ವಾಹನ- ಇಬ್ಬರ ಸಾವು

Last Updated 1 ಮಾರ್ಚ್ 2022, 14:54 IST
ಅಕ್ಷರ ಗಾತ್ರ

ಬೆಂಗಳೂರು: ತರಕಾರಿ ಸಾಗಿಸುತ್ತಿದ್ದ ಗೂಡ್ಸ್ ವಾಹನವೊಂದು ನಗರದ ಅರಮನೆ ರಸ್ತೆಯ ಸಿಐಡಿ ಜಂಕ್ಷನ್‌ನಲ್ಲಿ ಸೋಮವಾರ ರಾತ್ರಿ ಉರುಳಿ ಬಿದ್ದಿದ್ದು, ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

‘ಆಂಧ್ರಪ್ರದೇಶದ ಗೋಪಾಲರೆಡ್ಡಿ (47) ಹಾಗೂ ವೆಂಕಟರೆಡ್ಡಿ (30) ಮೃತರು. ಅಪಘಾತದಲ್ಲಿ ಮತ್ತಿಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ಹೇಳಿದರು.

‘ಆಂಧ್ರಪ್ರದೇಶದಿಂದ ತರಕಾರಿಯನ್ನು ಗೂಡ್ಸ್ ವಾಹನದಲ್ಲಿ ತುಂಬಿಕೊಂಡು ನಗರದ ಕೆ.ಆರ್. ಮಾರುಕಟ್ಟೆಗೆ ತರಲಾಗುತ್ತಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಸಿಐಡಿ ಜಂಕ್ಷನ್ ಬಳಿ ಚಾಲಕ ವಾಹನವನ್ನು ಅತೀ ವೇಗದಿಂದ ಚಲಾಯಿಸಿದ್ದ.’

‘ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಸ್ಥಳದಲ್ಲೇ ಮೂರು ಬಾರಿ ಉರುಳಿಬಿದ್ದಿತ್ತು. ತರಕಾರಿ ಚೀಲಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಉರುಳಿಬಿದ್ದ ವಾಹನದಲ್ಲಿದ್ದ ಗೋಪಾಲರೆಡ್ಡಿ ಹಾಗೂ ವೆಂಕಟರೆಡ್ಡಿ, ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು’ ಎಂದೂ ವಿವರಿಸಿದರು.

‘ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ. ಆತನಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದೂ ಹೇಳಿದರು.

ಅತ್ತಿಗುಪ್ಪೆ ಬಳಿ ಅಪಘಾತ: ಬ್ಯಾಟರಾಯನಪುರ ಸಂಚಾರ ಠಾಣೆ ವ್ಯಾಪ್ತಿಯ ಅತ್ತಿಗುಪ್ಪೆ ಬಸ್ ನಿಲ್ದಾಣ ಬಳಿ ಸೋಮವಾರ ರಾತ್ರಿ ಅಪಘಾತ ಸಂಭವಿಸಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

‘ಮೃತ ವ್ಯಕ್ತಿ ಹೆಸರು ಗೊತ್ತಾಗಿಲ್ಲ. ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಗುದ್ದಿದೆ. ಅದೇ ವಾಹನದ ಚಕ್ರ ವ್ಯಕ್ತಿ ಮೇಲೆ ಹರಿದಿದೆ. ತೀವ್ರ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಅ‍ಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT