ಸೋಮವಾರ, ಆಗಸ್ಟ್ 8, 2022
23 °C

ಕಾರು ಅಪಘಾತ: ಕೆಜಿಎಫ್‌ ನಟ ಅವಿನಾಶ್‌ ಅಪಾಯದಿಂದ ಪಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಎಂ.ಜಿ. ರಸ್ತೆಯ ಅನಿಲ್‌ಕುಂಬ್ಳೆ ವೃತ್ತದ ಬಳಿ ಬುಧವಾರ ಬೆಳಿಗ್ಗೆ ಕಾರು ಹಾಗೂ ಕಂಟೇನರ್‌ ಮಧ್ಯೆ ಅಪಘಾತ ಸಂಭವಿಸಿದ್ದು, ಕೆಜಿಎಫ್‌ 2 ಚಿತ್ರದ ನಟ ಬಿ.ಎಸ್. ಅವಿನಾಶ್‌ ಅಪಾಯದಿಂದ ಪಾರಾಗಿದ್ದಾರೆ.

ಅವಿನಾಶ್‌ ಅವರು ಈ ಚಿತ್ರದಲ್ಲಿ ಆ್ಯಂಡ್ರೋಸ್ ಪಾತ್ರ ನಿರ್ವಹಿಸಿದ್ದರು. ಅವರು ಜಯನಗರದಿಂದ ತಮ್ಮ ಕಾರಿನಲ್ಲಿ ಎಚ್‌ಆರ್‌ಆರ್‌ ಲೇಔಟ್‌ಗೆ ತೆರಳುತ್ತಿದ್ದರು. ಎಂ.ಜಿ. ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಕಂಟೇನರ್‌ ಇವರ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಂಟೇನರ್‌ ಚಾಲಕ ಶಿವಗೌಡನನ್ನು ವಶಕ್ಕೆ ಪಡೆದು, ವಾಹನ ಜಪ್ತಿ ಮಾಡಲಾಗಿದೆ ಎಂದು ಕಬ್ಬನ್‌ಪಾರ್ಕ್‌ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು