ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯನಗರದಲ್ಲಿ ಸರಣಿ ಅಪಘಾತ: ಎನ್‌ಆರ್‌ಐ ವಶಕ್ಕೆ

Published 24 ಮೇ 2024, 1:16 IST
Last Updated 24 ಮೇ 2024, 1:16 IST
ಅಕ್ಷರ ಗಾತ್ರ

ಬೆಂಗಳೂರು: ವಿಜಯನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಆರೋಪದಡಿ ಅನಿವಾಸಿ ಭಾರತೀಯ (ಎನ್‌ಆರ್‌ಐ) ಶ್ರೀಕಾಂತ್ ಶರ್ಮಾ ಅವರನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಮೇ 21ರಂದು ನಡೆದಿದ್ದ ಅಪಘಾತದ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಕಾರಿನ ನೋಂದಣಿ ಸಂಖ್ಯೆ ಆಧರಿಸಿ ಆರೋಪಿ ಶ್ರೀಕಾಂತ್‌ನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಲಂಡನ್‌ನಲ್ಲಿದ್ದ ಶ್ರೀಕಾಂತ್ ಶರ್ಮಾ ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ. ವಿಜಯನಗರ ಠಾಣೆ ವ್ಯಾಪ್ತಿಯಲ್ಲಿ ಮೇ 21ರಂದು ಕಾರಿನಲ್ಲಿ ಹೊರಟಿದ್ದ. ಎನ್‌ಪಿಎಸ್ ಜಂಕ್ಷನ್ ಬಳಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದ. ಈತನ ಕಾರು, ರಸ್ತೆ ಬದಿ ನಿಂತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿತ್ತು.’

‘ಅಪಘಾತದ ಬಳಿಕ ಕಾರಿನ ಸಮೇತ ಆರೋಪಿ ಪರಾರಿಯಾಗಿದ್ದ. ಸುಮ್ಮನಹಳ್ಳಿ ರಸ್ತೆಯಲ್ಲೂ ಅತೀ ವೇಗದಲ್ಲಿ ಕಾರು ಚಲಾಯಿಸಿದ್ದ. ಅಲ್ಲಿಯೂ 2 ಬೈಕ್‌ಗಳಿಗೆ ಕಾರು ಡಿಕ್ಕಿ ಹೊಡೆದಿತ್ತು. ರಸ್ತೆ ಬದಿ ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೂ ಕಾರು ಗುದ್ದಿತ್ತು. ಮಕ್ಕಳು ಗಾಯಗೊಂಡಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಅ‍ಪಘಾತ ಸ್ಥಳದಲ್ಲಿ ಸೇರಿದ್ದ ಸ್ಥಳೀಯರು, ಕಾರು ನಿಲ್ಲಿಸುವಂತೆ ಹೇಳಿದ್ದರು. ಅಷ್ಟಾದರೂ ಆರೋಪಿ, ಅಲ್ಲಿಂದ ಹೊರಟು ಪರಾರಿಯಾಗಿದ್ದ. ಸ್ಥಳಕ್ಕೆ ಹೋಗಿದ್ದ ಸಿಬ್ಬಂದಿ, ಸ್ಥಳೀಯರಿಂದ ಮಾಹಿತಿ ಪಡೆದಿದ್ದರು’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT