ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಕ್ರಿಟ್ ಮಿಕ್ಸರ್ ಲಾರಿ– ಬೈಕ್ ಅಪಘಾತ: ಸವಾರ ಸಾವು

Published 11 ಮಾರ್ಚ್ 2024, 16:07 IST
Last Updated 11 ಮಾರ್ಚ್ 2024, 16:07 IST
ಅಕ್ಷರ ಗಾತ್ರ

ಬೆಂಗಳೂರು: ವೈಟ್‌ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ಕಾಂಕ್ರಿಟ್ ಮಿಕ್ಸರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಸವಾರ ದೇವಸುಂದರ್ ಯಾದವ್ ಎಂಬುವವರು ಮೃತಪಟ್ಟಿದ್ದಾರೆ.

‘ಬಿಹಾರದ ದೇವಸುಂದರ್‌, ನಗರದ ಹೋಟೆಲ್‌ವೊಂದರಲ್ಲಿ ಅಡುಗೆ ತಯಾರಿ ಕೆಲಸ ಮಾಡುತ್ತಿದ್ದರು. ಪಟ್ಟಂದೂರು ಅಗ್ರಹಾರದಲ್ಲಿ ವಾಸವಿದ್ದರು’ ಎಂದು ಪೊಲೀಸರು ಹೇಳಿದರು.

‘ದೇವಸುಂದರ್ ಅವರು ಭಾನುವಾರ ಮಧ್ಯಾಹ್ನ ಬೈಕ್‌ನಲ್ಲಿ ವರ್ತೂರು ಕೋಡಿ ಸಮೀಪದಲ್ಲಿ ಹೊರಟಿದ್ದರು. ಇದೇ ಮಾರ್ಗದಲ್ಲಿ ಹೊರಟಿದ್ದ ಕಾಂಕ್ರಿಟ್ ಮಿಕ್ಸರ್ ಲಾರಿ, ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಬೈಕ್‌ನಿಂದ ಬಿದ್ದು ತೀವ್ರ ಗಾಯಗೊಂಡು ದೇವಸುಂದರ್ ಮೃತಪಟ್ಟಿದ್ದಾರೆ.’

‘ಲಾರಿ ಚಾಲಕನ ನಿರ್ಲಕ್ಷ್ಯ ಹಾಗೂ ಅತೀ ವೇಗದಿಂದ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಪಘಾತದ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT