ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಬೇಕರಿಗೆ ಡಿಕ್ಕಿ ಹೊಡೆದು ನಿಂತಿದೆ.

ಮಲ್ಲೇಶ್ವರದ ಲಿಂಕ್ ರಸ್ತೆಯಲ್ಲಿ ಗುರುವಾರ ಬೆಳಗಿನ ಜಾವ 4.30ಕ್ಕೆ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಫುಟ್ಪಾತ್ ಹತ್ತಿ ಬೇಕರಿಯ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಅಂಗಡಿಯ ಶಟರ್ ಮತ್ತು ಗೋಡೆ ಹಾನಿಗೊಳಗಾಗಿದ್ದು, ಪ್ರಾಣಾಪಾಯ ಸಂಭವಿಸಿಲ್ಲ.

ಮಲ್ಲೇಶ್ವರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಘಟನೆ ಬಳಿಕ ಚಾಲಕ ಠಾಣೆಗೆ ಹಾಜರಾಗಿದ್ದು, ಘಟನೆಯ ಬಗ್ಗೆ ಸಂಪೂರ್ಣ ವಿವರಣೆ ನೀಡಿದ್ದಾನೆ. ಲಾರಿಯನ್ನು ಜಪ್ತಿ ಮಾಡಲಾಗಿದೆ. ಘಟನೆ ಸಂಬಂಧ ಇದುವರೆಗೆ ಯಾರೂ ದೂರು ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.