ಶನಿವಾರ, ಅಕ್ಟೋಬರ್ 24, 2020
24 °C

ಮರಕ್ಕೆ ಗುದ್ದಿದ ಕಾರು; ಚಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಲ್ಲೇಶ್ವರದಲ್ಲಿ ಶನಿವಾರ ತಡರಾತ್ರಿ ಮರಕ್ಕೆ ಕಾರೊಂದು ಗುದ್ದಿದ್ದು, ಚಾಲಕ ರಜತ್ (27) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

‘ವಿಜಯನಗರದ ರಜತ್, ಮನೆಗೆ ಕಾರಿನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಮೃತದೇಹವನ್ನು ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಅತೀ ವೇಗವಾಗಿ ಹೊರಟಿದ್ದ ಮರಕ್ಕೆ ಗುದ್ದಿತ್ತು. ಮುಂಭಾಗ ಜಖಂಗೊಂಡು ಚಾಲಕ ರಜತ್‌ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಮೃತಪಟ್ಟರು’ ಎಂದೂ ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.