ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲೂರು ರಸ್ತೆಯಲ್ಲಿ ಅಪಘಾತ: ಎಂಜಿನಿಯರ್ ಸಾವು

Published 7 ಏಪ್ರಿಲ್ 2024, 15:56 IST
Last Updated 7 ಏಪ್ರಿಲ್ 2024, 15:56 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಮೈಲನಹಳ್ಳಿ–ಬಾಗಲೂರು ರಸ್ತೆಯಲ್ಲಿ ಟಾಟಾ ಏಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಶನಿವಾರ ಅಪಘಾತ ಸಂಭವಿಸಿದ್ದು, ಸವಾರ ಎಲ್‌. ರಘು (30) ಮೃತಪಟ್ಟಿದ್ದಾರೆ.

‘ಹೂವಿನ ನಾಯಕನಹಳ್ಳಿಯ ಎಲ್. ರಘು, ಮಾನ್ಯತಾ ಟೆಕ್‌ ಪಾರ್ಕ್‌ನ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಒಂದು ತಿಂಗಳಿನಿಂದ ಕೆಲಸಕ್ಕೆ ಹೋಗಿರಲಿಲ್ಲ. ಮನೆಯಲ್ಲಿದ್ದರು. ಬ್ಯಾಂಕ್‌ಗೆ ಹೋಗಿ ವಾಪಸು ಮನೆಯತ್ತ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ದೇವನಹಳ್ಳಿ ಸಂಚಾರ ಠಾಣೆ ಪೊಲೀಸರು ಹೇಳಿದರು.

‘ರಘು ಅವರು ದ್ವಿಚಕ್ರ ವಾಹನದಲ್ಲಿ ಮೈಲನಹಳ್ಳಿಯಿಂದ ತಮ್ಮೂರಿನತ್ತ ಹೊರಟಿದ್ದರು. ಇದೇ ಮಾರ್ಗದಲ್ಲಿ ಹೋಗುತ್ತಿದ್ದ ಟಾಟಾ ಏಸ್ ವಾಹನ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ವಾಹನ ಸಮೇತ ಬಿದ್ದಿದ್ದ ರಘು ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.

‘ಟಾಟಾ ಏಸ್ ವಾಹನ ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡು, ಚಾಲಕನನ್ನು ಬಂಧಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT