ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಜ್ಞಾನಭಾರತಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಅಪಘಾತ: ಕಂಪನಿ ವ್ಯವಸ್ಥಾಪಕ ಸಾವು

Published 18 ಮೇ 2024, 2:47 IST
Last Updated 18 ಮೇ 2024, 2:47 IST
ಅಕ್ಷರ ಗಾತ್ರ

ಬೆಂಗಳೂರು: ಜ್ಞಾನಭಾರತಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ವರುಣ್ (25) ಎಂಬುವವರು ಮೃತಪಟ್ಟಿದ್ದಾರೆ.

‘ಮೂಡಲಪಾಳ್ಯದ ವರುಣ್, ಕಂಪನಿಯೊಂದರ ವ್ಯವಸ್ಥಾಪಕ. ದ್ವಿಚಕ್ರ ವಾಹನದಲ್ಲಿ ಮನೆಗೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸರು ಹೇಳಿದರು.

‘ವರುಣ್ ಅವರು ಹೊರವರ್ತುಲ ರಸ್ತೆಯ ಸುಮನಹಳ್ಳಿ ವೃತ್ತದಿಂದ ನಾಗರಬಾವಿ ವೃತ್ತದ ಕಡೆಗೆ ಹೊರಟಿದ್ದರು. ಮಾರ್ಗಮಧ್ಯೆ ಸರ್ವೀಸ್ ರಸ್ತೆಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ, ರಸ್ತೆ ವಿಭಜಕಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿತ್ತು. ಇದರಿಂದಾಗಿ ವರುಣ್ ಅವರು ವಾಹನ ಸಮೇತ ಉರುಳಿಬಿದ್ದಿದ್ದರು. ತಲೆಗೆ ತೀವ್ರ ಪೆಟ್ಟು ಬಿಟ್ಟು ಅವರು ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT