ಮಂಗಳವಾರ, ಮಾರ್ಚ್ 2, 2021
19 °C

ಟ್ಯಾಂಕರ್‌ಗೆ ಗುದ್ದಿದ ಬೈಕ್; ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಗ್ಗೆರೆ ಬಳಿ ಹೊರವರ್ತುಲ ರಸ್ತೆಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಬುಲೆಟ್ ಬೈಕೊಂದು ಗುದ್ದಿದ್ದು, ಸವಾರ ಶಿವಕುಮಾರ್ (31) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

‘ಕಮಲಾನಗರ ನಿವಾಸಿಯಾಗಿದ್ದ ಶಿವಕುಮಾರ್, ಜಾಲಹಳ್ಳಿಯ ಮಾರುತಿ ಸುಜುಕಿ ಶೋರೂಂನಲ್ಲಿ ಉದ್ಯೋಗಿಯಾಗಿದ್ದರು. ಕೆಲಸ ಮುಗಿಸಿಕೊಂಡು ಶುಕ್ರವಾರ ರಾತ್ರಿ ಮನೆಗೆ ಮರಳುವಾಗ ಅವಘಡ ಸಂಭವಿಸಿದೆ’ ಎಂದು ರಾಜಾಜಿನಗರ ಸಂಚಾರ ಠಾಣೆ ಪೊಲೀಸರು ಹೇಳಿದರು.

‘ಟ್ಯಾಂಕರ್‌ನಲ್ಲಿ ಹಾಲು ತುಂಬಿಕೊಂಡು ಹೊರಟಿದ್ದ ಚಾಲಕ, ರಸ್ತೆ ಬದಿಯಲ್ಲಿ ಟ್ಯಾಂಕರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ಹೋಗಿದ್ದರು. ಅದೇ ಮಾರ್ಗವಾಗಿ ಹೊರಟಿದ್ದ ಶಿವಕುಮಾರ್, ತಮ್ಮ ಬುಲೆಟ್ ಬೈಕ್‌ನ್ನು ಟ್ಯಾಂಕರ್‌ಗೆ ಗುದ್ದಿಸಿದ್ದರು ಎಂದು ಗೊತ್ತಾಗಿದೆ. ಅವಘಡದಿಂದ ಬೈಕ್ ಸಂಪೂರ್ಣ ಜಖಂಗೊಂಡಿದೆ. ತಲೆಗೆ ತೀವ್ರ ಪೆಟ್ಟು ಬಿದ್ದು, ರಕ್ತಸ್ರಾವವಾಗಿ ಶಿವಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು