ಶುಕ್ರವಾರ, ಏಪ್ರಿಲ್ 23, 2021
31 °C

ಆವರಣ ಗೋಡೆಗೆ ಬೈಕ್‌ ಡಿಕ್ಕಿ: ಸವಾರ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಪಾರ್ಟ್‌ಮೆಂಟ್ ಸಮುಚ್ಚಯದ ಆವರಣ ಗೋಡೆಗೆ ಬೈಕ್ ಡಿಕ್ಕಿಯಾಗಿ ಸಿನಿಮಾ ವಿತರಕರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿ ಭಾನುವಾರ ಸಂಜೆ ನಡೆದಿದೆ.

ಉತ್ತರ ಭಾರತ ಮೂಲದವರಾದ ಕ್ರೆಸೆಂಟ್ ರಸ್ತೆ ನಿವಾಸಿ ಅಜಯ್ ಚಂದಾನಿ (48) ಗಾಯಗೊಂಡವರು. ಅತಿವೇಗವೇ ಘಟನೆಗೆ ಕಾರಣ ಎನ್ನಲಾಗಿದೆ.

ಭಾನುವಾರ ಸಂಜೆ 6.30ರ ಸುಮಾರಿಗೆ ಅಜಯ್‌, ಕಲ್ಪನಾ ಜಂಕ್ಷನ್‌ನಿಂದ ಕನ್ನಿಂಗ್ ಹ್ಯಾಂ ರಸ್ತೆಯ ಕಡೆಗೆ ವೇಗವಾಗಿ ಬರುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಕನ್ನಿಂಗ್ ಹ್ಯಾಮ್ ರಸ್ತೆಯ ಹುಡ್ ಅಪಾರ್ಟ್‌ಮೆಂಟ್ ಸಮುಚ್ಚಯದ ಆವರಣ ಗೋಡೆಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಅಜಯ್ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು