ಶನಿವಾರ, ಜೂನ್ 6, 2020
27 °C

ಅಪಘಾತ: ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ದಿನಪತ್ರಿಕೆ ಹಂಚುವ ಯುವಕ ಎಚ್‌.ಸಿ.ಯೋಗೇಶ್ (22) ಎಂಬುವರು ಮೃತಪಟ್ಟಿದ್ದಾರೆ.

‘ಲಗ್ಗೆರೆಯ ಲಕ್ಷ್ಮಿದೇವಿನಗರ ನಿವಾಸಿಯಾಗಿದ್ದ ಯೋಗೇಶ್, ದಿನಪತ್ರಿಕೆ ಹಂಚಲು ಬುಧವಾರ (ಮೇ 20) ಬೆಳಿಗ್ಗೆ ಮನೆಯಿಂದ ಬಂದಿದ್ದರು. ಪತ್ರಿಕೆಗಳನ್ನು ತೆಗೆದುಕೊಂಡು ಹಂಚಲು ಹೊರಟಿದ್ದ ವೇಳೆಯಲ್ಲೇ ಅಪಘಾತ ಸಂಭವಿಸಿತ್ತು’ ಎಂದು ರಾಜಾಜಿನಗರ ಸಂಚಾರ ಪೊಲೀಸರು ಹೇಳಿದರು.

‘ಶಶಿಕರ್ ಗಾರ್ಮೆಂಟ್ಸ್ ಕಾರ್ಖಾನೆ ಎದುರು ಯೋಗೇಶ್‌ ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾಗ, ಎದುರಿಗೆ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿತ್ತು. ಯೋಗೇಶ್‌ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.’

‘ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ಮಧ್ಯಾಹ್ನ ಯೋಗೇಶ್ ಅಸುನೀಗಿದರು. ಅವರಿಗೆ ತಂದೆ-ತಾಯಿ, ಸಹೋದರ-ಸಹೋದರಿ ಇದ್ದಾರೆ. ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಹಸ್ತಾಂತರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು