ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ, ಕಾಡುಗೊಂಡನಹಳ್ಳಿ (ಕೆ.ಜಿ. ಹಳ್ಳಿ) ಹಾಗೂ ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ.

ನಾಗನಾಥಪುರ ನಿವಾಸಿ ನಾಗರಾಜು, ಅಟ್ಟೂರು ನಿವಾಸಿ ದೇವರಾಜ್ (21) ಹಾಗೂ ನಾಗವಾರದ ನಿವಾಸಿ ಮಹೇಂದ್ರಕುಮಾರ್ (50) ಮೃತರು.

ಸೈಕಲ್‌ಗೆ ಕಾರು ಡಿಕ್ಕಿ: ‘ಗಾರ್ಮೆಂಟ್ಸ್ ಉದ್ಯೋಗಿ ನಾಗರಾಜು, ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ಸೈಕಲ್‌ನಲ್ಲಿ ಮನೆಯತ್ತ ಹೊರಟಿದ್ದರು. ಇದೇ ಸಂದರ್ಭದಲ್ಲಿ ಸೈಕಲ್‌ಗೆ ಕಾರು ಡಿಕ್ಕಿ ಹೊಡೆದಿತ್ತು’ ಎಂದು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆ ಪೊಲೀಸರು ಹೇಳಿದರು.

‘ತೀವ್ರ ಗಾಯಗೊಂಡಿದ್ದ ನಾಗರಾಜು ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ. ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಆರೋಪದಡಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ತಿಳಿಸಿದರು.

ಬೈಕ್‌ಗೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ: ‘ಯಾದಗಿರಿಯ ದೇವರಾಜ್, ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದರು. ಅಟ್ಟೂರಿನಲ್ಲಿ ನೆಲೆಸಿದ್ದರು’ ಎಂದು ಯಲಹಂಕ ಸಂಚಾರ ಠಾಣೆ ಪೊಲೀಸರು ಹೇಳಿದರು.

‘ದೇವರಾಜ್ ಅವರು ಭಾನುವಾರ ಬೆಳಿಗ್ಗೆ ಎಂ.ಎಸ್.ಪಾಳ್ಯ ರಸ್ತೆಯಲ್ಲಿ ಬೈಕ್‌ನಲ್ಲಿ ಹೊರಟಿದ್ದರು. ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಸಿಮೆಂಟ್ ಮಿಕ್ಸರ್ ಲಾರಿ, ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಬೈಕ್ ಸಮೇತ ಬಿದ್ದಿದ್ದ ದೇವರಾಜ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಮೆಟ್ರೊ ಕಾಮಗಾರಿ ಲಾರಿ ಜಪ್ತಿ: ‘ ಆಸ್ಪತ್ರೆಯೊಂದರಲ್ಲಿ ಸ್ವಚ್ಛತೆ ಕೆಲಸ ಮಾಡುತ್ತಿದ್ದ ಮಹೇಂದ್ರ ಕುಮಾರ್ ಎಂಬುವರು ಶನಿವಾರ ಸಂಜೆ ಕೆಲಸ ಮುಗಿಸಿ ಜೆಎಂಜೆ ರಸ್ತೆಯಲ್ಲಿ ನಡೆದುಕೊಂಡು ಮನೆಯತ್ತ ಹೊರಟಿದ್ದಾಗ ಅಪಘಾತ ಸಂಭವಿಸಿದೆ’ ಎಂದು ಪೊಲೀಸರು ಹೇಳಿದರು.

‘ಮೆಟ್ರೊ ಕಾಮಗಾರಿಗೆ ಕಾಂಕ್ರಿಟ್ ಸಾಗಿಸುತ್ತಿದ್ದ ಲಾರಿ, ಮಹೇಂದ್ರ ಅವರಿಗೆ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಜಪ್ತಿ ಮಾಡಲಾಗಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.