ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಕು ಸಾಗಣೆ ಆಟೊ - ಬೈಕ್‌ ಅಪಘಾತ: ಇಬ್ಬರು ಯುವಕರ ಸಾವು

Published 10 ಏಪ್ರಿಲ್ 2024, 16:18 IST
Last Updated 10 ಏಪ್ರಿಲ್ 2024, 16:18 IST
ಅಕ್ಷರ ಗಾತ್ರ

ಬೆಂಗಳೂರು: ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಅಂದ್ರಹಳ್ಳಿ ರಸ್ತೆಯಲ್ಲಿ ಮಂಗಳವಾರ ರಾತ್ರಿ ಸರಕು ಸಾಗಣೆ ಆಟೊ ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಅಂದ್ರಹಳ್ಳಿ ನಿವಾಸಿಗಳಾದ ಫಾರೂಕ್ (18) ಮತ್ತು ಅಬ್ರಾರ್ ಅಹ್ಮದ್(18) ಮೃತಪಟ್ಟವರು.

ಘಟನೆಯಲ್ಲಿ ಮತ್ತೊಬ್ಬ ಮೊಹಮ್ಮದ್ ಸಿದ್ದಿಕ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಹೇಳಿದರು.

ಒಂದೇ ಬೈಕ್‌ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಅಂದ್ರಹಳ್ಳಿ ಮುಖ್ಯರಸ್ತೆಯಲ್ಲಿ ರಾತ್ರಿ 11.30ರ ಸುಮಾರಿಗೆ ಎದುರಿನಿಂದ ಇಳಿಜಾರು ರಸ್ತೆಯಲ್ಲಿ ಸರಕು ಸಾಗಣೆ ಆಟೊ ಬರುತ್ತಿತ್ತು. ಆಗ ನಿಯಂತ್ರಣ ಕಳೆದುಕೊಂಡು ಬೈಕ್‌ಗೆ ಆಟೊ ಡಿಕ್ಕಿಯಾಗಿದೆ. ಪರಿಣಾಮ ಮೂವರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಆ ಮೂವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಇಬ್ಬರು ಮೃತಪಟ್ಟಿದ್ಧಾರೆ ಎಂದು ಸಂಚಾರ ಪೊಲೀಸರು ಹೇಳಿದರು.

ಗೂಡ್ಸ್‌ ಆಟೊದ ಚಾಲಕ ಉಮೇಶ್ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಆತನ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

‘ಚಲಿಸುತ್ತಿದ್ದ ವೇಳೆ ಸರಕು ಸಾಗಣೆ ಆಟೊದ ಮುಂದಿನ ಟೈರ್ ಸ್ಫೋಟಗೊಂಡ ಪರಿಣಾಮ ಅಪಘಾತ ಸಂಭವಿಸಿರುವ ಸಾಧ್ಯತೆಯಿದೆ. ಈ ಕುರಿತು ತನಿಖೆ ಮಾಡಲಾಗುತ್ತಿದೆ’ ಎಂದು ಉತ್ತರ ಸಂಚಾರ ವಿಭಾಗದ ಡಿಸಿಪಿ ಸಿರಿಗೌರಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT