ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಪಘಾತ: ಅಕ್ಕ, ತಮ್ಮ ಸಾವು

Published 7 ಜೂನ್ 2024, 16:19 IST
Last Updated 7 ಜೂನ್ 2024, 16:19 IST
ಅಕ್ಷರ ಗಾತ್ರ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡ ನಾಗಮಂಗಲದಲ್ಲಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಅಕ್ಕ ಮತ್ತು ತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದೊಡ್ಡ ನಾಗಮಂಗಲದ ಕೆಂಪೇಗೌಡ ಬಡಾವಣೆ ನಿವಾಸಿ ಮಧುಮಿತಾ (20) ಹಾಗೂ ಅವರ ತಮ್ಮ ರಂಜನ್ (18) ಮೃತಪಟ್ಟವರು.

ಮಧುಮಿತಾ ಎರಡನೇ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದರು. ರಂಜನ್ ಮೊದಲ ವರ್ಷದ ಪದವಿ ವಿದ್ಯಾರ್ಥಿ.

ಮಧುಮಿತಾ ಅವರು ರಜೆ ಮುಗಿಸಿ ಮೊದಲ ದಿನ ಕಾಲೇಜಿಗೆ ಸಹೋದರನ ಜತೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯದಲ್ಲಿ ಬೈಕ್‌ ಹಾಗೂ ನೀರಿನ ಟ್ಯಾಂಕರ್ ನಡುವೆ ಅಪಘಾತವಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರೂ ಕೆಳಕ್ಕೆ ಬಿದ್ದಿದ್ದರು. ಅವರ ಮೇಲೆ ಟ್ಯಾಂಕರ್‌ನ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟರು ಎಂದು ಸಂಚಾರ ಪೊಲೀಸರು ಹೇಳಿದರು.

ಅಕ್ಕ ಮತ್ತು ತಮ್ಮ ಹೆಲ್ಮೆಟ್ ಧರಿಸಿರಲಿಲ್ಲ. ನೀರಿನ ಟ್ಯಾಂಕರ್ ಅನ್ನು ರಸ್ತೆ ಮಧ್ಯೆಯೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ವಾಟರ್ ಟ್ಯಾಂಕರ್ ಜಪ್ತಿ ಮಾಡಲಾಗಿದೆ ಎಂದು ಎಲೆಕ್ಟ್ರಾನಿಕ್ ಸಿಟಿ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.

ಚಾಲಕನ ಅತಿ ವೇಗ ಮತ್ತು ಅಜಾಗರೂಕತೆ ಚಾಲನೆ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT