ಬೆಂಗಳೂರು: ಕಾಟನ್‍ಪೇಟೆ ಠಾಣಾ ವ್ಯಾಪ್ತಿಯಲ್ಲಿ ಮನೆಯ ಬಾಗಿಲು ಮುರಿದು ಚಿನ್ನಾಭರಣ, ನಗದು ಕದ್ದಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ನರಪತ್ ಸಿಂಗ್ (41), ಕಪೂರ್ ಸಿಂಗ್ (39), ಪ್ರದೀಪ್ ವ್ಯಾಸ್ (46) ಹಾಗೂ ಧನರಾಜ್ (48) ಬಂಧಿತರು.

ಮನೆಯ ಮಾಲೀಕರು ಹೊಲಿಗೆಯಂತ್ರ ರಿಪೇರಿಗಾಗಿ ಅಕ್ಕಿಪೇಟೆಗೆ ತೆರಳಿದ್ದರು. ಈ ವೇಳೆ ಮನೆಯ ಬಾಗಿಲು ಮೀಟಿ, ಒಳಪ್ರವೇಶಿಸಿದ್ದ ಆರೋಪಿಗಳು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿ ಸಾಮಾನು ಹಾಗೂ ನಗದು ಕದ್ದು ಪರಾರಿಯಾಗಿದ್ದರು. ಈ ಸಂಬಂಧ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದರು.

‘ತನಿಖೆ ವೇಳೆ ಮೂವರನ್ನು ಪತ್ತೆ ಹಚ್ಚಿದ್ದ ಪೊಲೀಸರು, ಧನರಾಜ್‍ನನ್ನು ಪ್ರತ್ಯೇಕವಾಗಿ ಬಂಧಿಸಿದರು. ಆರೋಪಿಗಳಿಂದ ಕಾಟನ್‍ಪೇಟೆ ಸರಹದ್ದಿನಲ್ಲಿ ವರದಿಯಾಗಿರುವ ಮೂರು ಕಳವು ಪ್ರಕರಣಗಳಿಗೆ ಸಂಬಂಧಿಸಿದ ₹10 ಲಕ್ಷ ಮೌಲ್ಯದ ಚಿನ್ನಾಭರಣ, 7 ಕೆ.ಜಿ ಬೆಳ್ಳಿ ಆಭರಣಗಳು ಹಾಗೂ ₹12 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.