ಸೋಮವಾರ, ಜನವರಿ 25, 2021
27 °C

ಮನೆಯಲ್ಲಿ ಕಳ್ಳತನ: ನಾಲ್ವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಟನ್‍ಪೇಟೆ ಠಾಣಾ ವ್ಯಾಪ್ತಿಯಲ್ಲಿ ಮನೆಯ ಬಾಗಿಲು ಮುರಿದು ಚಿನ್ನಾಭರಣ, ನಗದು ಕದ್ದಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ನರಪತ್ ಸಿಂಗ್ (41), ಕಪೂರ್ ಸಿಂಗ್ (39), ಪ್ರದೀಪ್ ವ್ಯಾಸ್ (46) ಹಾಗೂ ಧನರಾಜ್ (48) ಬಂಧಿತರು.

ಮನೆಯ ಮಾಲೀಕರು ಹೊಲಿಗೆಯಂತ್ರ ರಿಪೇರಿಗಾಗಿ ಅಕ್ಕಿಪೇಟೆಗೆ ತೆರಳಿದ್ದರು. ಈ ವೇಳೆ ಮನೆಯ ಬಾಗಿಲು ಮೀಟಿ, ಒಳಪ್ರವೇಶಿಸಿದ್ದ ಆರೋಪಿಗಳು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿ ಸಾಮಾನು ಹಾಗೂ ನಗದು ಕದ್ದು ಪರಾರಿಯಾಗಿದ್ದರು. ಈ ಸಂಬಂಧ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದರು.

‘ತನಿಖೆ ವೇಳೆ ಮೂವರನ್ನು ಪತ್ತೆ ಹಚ್ಚಿದ್ದ ಪೊಲೀಸರು, ಧನರಾಜ್‍ನನ್ನು ಪ್ರತ್ಯೇಕವಾಗಿ ಬಂಧಿಸಿದರು. ಆರೋಪಿಗಳಿಂದ ಕಾಟನ್‍ಪೇಟೆ ಸರಹದ್ದಿನಲ್ಲಿ ವರದಿಯಾಗಿರುವ ಮೂರು ಕಳವು ಪ್ರಕರಣಗಳಿಗೆ ಸಂಬಂಧಿಸಿದ ₹10 ಲಕ್ಷ ಮೌಲ್ಯದ ಚಿನ್ನಾಭರಣ, 7 ಕೆ.ಜಿ ಬೆಳ್ಳಿ ಆಭರಣಗಳು ಹಾಗೂ ₹12 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು