ಶುಕ್ರವಾರ, ಜನವರಿ 27, 2023
27 °C

ಡ್ರಗ್ಸ್ ಜಾಲ: ಕೇರಳದ ಇಬ್ಬರು ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ತಮ್ಮದೇ ತಂಡ ಕಟ್ಟಿಕೊಂಡು ಡ್ರಗ್ಸ್ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಕೇರಳದ ಇಜಾಸ್ ಹಾಗೂ ವಿ.ಎಂ. ಅರ್ಫತ್ ಬಂಧಿತರು. ಇವರಿಂದ ₹ 10 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್, ಎರಡು ಮೊಬೈಲ್ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.

‘ಬೇಗೂರು ಠಾಣೆ ವ್ಯಾಪ್ತಿಯಲ್ಲಿ ಸುತ್ತಾಡುತ್ತಿದ್ದ ಆರೋಪಿಗಳು, ಪರಿಚಯಸ್ಥ ಗ್ರಾಹಕರಿಗೆ ಡ್ರಗ್ಸ್ ಮಾರುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಇಬ್ಬರನ್ನೂ ಬಂಧಿಸಲಾಯಿತು’ ಎಂದು ಮೂಲಗಳು ತಿಳಿಸಿವೆ.

‘ಡ್ರಗ್ಸ್ ಮಾರಿ ಹಣ ಸಂಪಾದಿಸುವ ಉದ್ದೇಶದಿಂದಲೇ ಆರೋಪಿಗಳು ಬೆಂಗಳೂರಿಗೆ ಬಂದಿದ್ದರು. ನೈಜೀರಿಯಾ ಪ್ರಜೆಗಳನ್ನು ಪರಿಚಯಿಸಿಕೊಂಡು, ಅವರಿಂದ ಡ್ರಗ್ಸ್ ಖರೀದಿಸುತ್ತಿದ್ದರು. ಅದೇ ಮಾದಕ ವಸ್ತುವನ್ನು ಗ್ರಾಂಗೆ ₹10 ಸಾವಿರದಿಂದ ₹12 ಸಾವಿರಕ್ಕೆ ಮಾರುತ್ತಿದ್ದರು.’

‘ಡ್ರಗ್ಸ್ ಮಾರಾಟದಿಂದ ಆರೋಪಿಗಳು ಲಕ್ಷಾಂತರ ರೂಪಾಯಿ ಸಂಪಾದಿಸಿದ್ದಾರೆ. ಇವರ ಜೊತೆ ಮತ್ತಷ್ಟು ಮಂದಿ ಭಾಗಿಯಾಗಿರುವ ಮಾಹಿತಿ ಇದ್ದು, ತನಿಖೆ ಮುಂದುವರಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು