ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ₹2.95 ಲಕ್ಷ ಮೌಲ್ಯದ ವಾಹನಗಳು ಜಪ್ತಿ: ಆರೋಪಿ ಬಂಧನ

Published 12 ಜೂನ್ 2024, 15:41 IST
Last Updated 12 ಜೂನ್ 2024, 15:41 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪುಲಕೇಶಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ ₹2.95 ಲಕ್ಷ ಮೌಲ್ಯದ ಮೂರು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

‘ಎಚ್‌ಬಿಆರ್‌ ಲೇಔಟ್‌ನ ಇಲಾಲ್‌ನಗರದ ನಿವಾಸಿ ಎಸ್.ಎಂ. ಜಸೀಂ (27) ಬಂಧಿತ ಆರೋಪಿ. ಜಸೀಂ, ರ್‍ಯಾಪಿಡೊ, ಸ್ವಿಗ್ಗಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ. ತಾನು ಮಾಡುವ ಕೆಲಸದಿಂದ ಬರುತ್ತಿದ್ದ ಹಣ ಸಾಕಾಗದೇ, ಐಶಾರಾಮಿ ಜೀವನ ನಡೆಸುವ ಉದ್ದೇಶದಿಂದ ಆರೋಪಿಯು ಕಳ್ಳತನ ಮಾಡುತ್ತಿದ್ದ’ ಎಂದು ಪೊಲೀಸರು ತಿಳಿಸಿದರು.

‘ಆರೋಪಿಯು ಕಳ್ಳತನ ಮಾಡಿದ್ದ ವಾಹನಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ. ಆದರೆ, ವಾಹನಗಳ ದಾಖಲಾತಿ ಇಲ್ಲದ ಕಾರಣ ಮಾರಾಟ ಮಾಡಲು ಸಾಧ್ಯವಾಗದೇ ತನ್ನ ಬಳಿಯೇ ಇಟ್ಟುಕೊಂಡಿದ್ದ. ಖಚಿತ ಮಾಹಿತಿಗೆ ಮೇರೆಗೆ ದಾಳಿ ನಡೆಸಿ ವಾಹನಗಳ ಸಮೇತ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT