‘ಬಂಧನದ ಭೀತಿಯಿಂದ ಆರೋಪಿಗಳಿಬ್ಬರು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು. ಇಬ್ಬರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿತ್ತು. ತನಿಖೆ ವೇಳೆ ಅಧಿಕಾರಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇರಿಸಿದ್ದ ಕಾಲ್ ರೆಕಾರ್ಡ್‌ಗಳು, ಖಾಸಗಿ ಸುದ್ದಿ ವಾಹಿನಿಯ ರಹಸ್ಯ ಕಾರ್ಯಾಚರಣೆ ವಿಡಿಯೊಗಳು, ಆರೋಪಿಗಳ ಧ್ವನಿ ಮಾದರಿ ಸಂಗ್ರಹಿಸಲಾಗಿತ್ತು. ತಾಂತ್ರಿಕ ಸಾಕ್ಷ್ಯ ಹಾಗೂ ಧ್ವನಿ ಮಾದರಿಗಳನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ(ಎಫ್‌ಎಸ್‌ಎಲ್) ಕಳುಹಿಸಲಾಗಿತ್ತು. ಎಫ್‌ಎಸ್ಎಲ್ ವರದಿ ಬರುವುದು ವಿಳಂಬವಾಗಿತ್ತು. ಕಳೆದ ವಾರ ವರದಿ ಬಂದಿದ್ದು, ಮೂರು ದಿನಗಳ ಹಿಂದೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ’ ಎಂದು ಮೂಲಗಳು ಹೇಳಿವೆ.