ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತ್ರಿಪುರಾದಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಗಾಂಜಾ ಸಾಗಣೆ: ಆರೋಪಿ ಬಂಧನ

Published 26 ಜೂನ್ 2024, 14:29 IST
Last Updated 26 ಜೂನ್ 2024, 14:29 IST
ಅಕ್ಷರ ಗಾತ್ರ

ಬೆಂಗಳೂರು: ತ್ರಿಪುರಾದಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ದೀಪನ್‌ದಾಸ್‌ ಅವರನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

‘ಆರೋಪಿಯಿಂದ 32.8 ಕೆ.ಜಿ ಗಾಂಜಾ ಜಪ್ತಿ ಮಾಡಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ’ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

‘ತ್ರಿಪುರಾದ ಅಗರ್ತಲಾದಿಂದ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೆ ಟರ್ಮಿನಲ್‌ಗೆ ಬಂದ ರೈಲಿನಲ್ಲಿ ಗಾಂಜಾ ಪತ್ತೆಯಾಗಿದೆ. ಬಂಧಿತ ಆರೋಪಿ ಅಗರ್ತಲಾ–ಬೆಂಗಳೂರು ಎಕ್ಸ್‌ಪ್ರೆಸ್​ ರೈಲಿನಲ್ಲಿ ಗುತ್ತಿಗೆ ಆಧಾರದಲ್ಲಿ ಬೆಡ್ ರೋಲರ್ ಕೆಲಸ ಮಾಡುತ್ತಿದ್ದ‌ರು. ತ್ರಿಪುರಾದ ಸುಮನ್ ಹಾಗೂ ಬೆಂಗಳೂರಿನಲ್ಲಿ ಗಾಂಜಾ ಆಮದು ಮಾಡಿಕೊಳ್ಳುತ್ತಿದ್ದ ಬಿಸ್ವಜಿತ್ ಎಂಬವರು ನಾಪತ್ತೆಯಾಗಿದ್ದು, ಪತ್ತೆ ಕಾರ್ಯ ನಡೆಯುತ್ತಿದೆ. ಬೈಯಪ್ಪನಹಳ್ಳಿ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ರಾಜ್ಯ ರೈಲ್ವೆ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಕೆ.ಸೌಮ್ಯಲತಾ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT