ಮಂಗಳವಾರ, ಜನವರಿ 21, 2020
27 °C

ಬೈಕ್ ಅಡ್ಡಗಟ್ಟಿ ಆ್ಯಸಿಡ್ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆನೇಕಲ್ ತಾಲ್ಲೂಕಿನ ಚಂದಾಪುರ ಬಳಿ ಜ್ಯೋತಪ್ಪ (50) ಎಂಬುವರ ಮೇಲೆ ಆ್ಯಸಿಡ್ ಎರಚಲಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಅವರನ್ನು ನಗರದ ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಬಿ.ಹೊಸಹಳ್ಳಿ ನಿವಾಸಿ ಜ್ಯೋತಪ್ಪ ಅವರು ಶುಕ್ರವಾರ ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು. ಅದೇ ವೇಳೆ ಅವರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳಿಬ್ಬರು ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ’ ಎಂದು ಸೂರ್ಯಸಿಟಿ ಪೊಲೀಸರು ಹೇಳಿದರು.

‘ಜ್ಯೋತಪ್ಪ ಅವರ ಮುಖ, ಎದೆ, ಕೈ – ಕಾಲುಗಳಿಗೆ ಗಾಯಗಳಾಗಿವೆ. ಅವರ ಹೇಳಿಕೆ ಪಡೆದು ತನಿಖೆ ಮುಂದುವರಿಸಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದರು. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು