ಬೆಂಗಳೂರು: ಪ್ರೀತಿ ನಿರಾಕರಿಸಿದರೆಂಬ ಕಾರಣಕ್ಕೆ 24 ವರ್ಷದ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ಆರೋಪಿ ನಾಗೇಶ್‌ನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, ತಮಿಳುನಾಡಿನಲ್ಲಿ ವಶಕ್ಕೆ ಪಡೆದಿದ್ದಾರೆ. ಆತನನ್ನು ನಗರಕ್ಕೆ ಕರೆತರುತ್ತಿದ್ದಾರೆ.

ಏಪ್ರಿಲ್ 28ರಂದು ಕೃತ್ಯ ಎಸಗಿದ್ದ ನಾಗೇಶ್, ರಾಜ್ಯದಿಂದಲೇ ಪರಾರಿಯಾಗಿದ್ದ. ಆತ ಎಲ್ಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿರಲಿಲ್ಲ. ಆತನ ಪತ್ತೆಗೆ ಲುಕ್‌ಔಟ್ ಸಹ ಹೊರಡಿಸಲಾಗಿತ್ತು.

ಸಣ್ಣದೊಂದು ಗಾರ್ಮೆಂಟ್ಸ್ ಕಾರ್ಖಾನೆ ನಡೆಸುತ್ತಿದ್ದ ನಾಗೇಶ್, ಏಳು ವರ್ಷಗಳಿಂದ ಯುವತಿ ಹಿಂದೆ ಬಿದ್ದಿದ್ದ. ವ್ಯವಸ್ಥಿತವಾಗಿ ಸಂಚು ರೂಪಿಸಿ ಆ್ಯಸಿಡ್ ಎರಚಿ ಪರಾರಿಯಾಗಿದ್ದ. ಪಶ್ಚಿಮ ವಿಭಾಗದ ಎಂಟು ಪೊಲೀಸ್ ತಂಡಗಳು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.