ಆ್ಯಸಿಡ್ ದಾಳಿ: ಆರೋಪಿ ಪತ್ತೆಗೆ ಲುಕ್‌ಔಟ್ ನೋಟಿಸ್

ಬೆಂಗಳೂರು: ಪ್ರೀತಿ ನಿರಾಕರಿಸಿದರೆಂಬ ಕಾರಣಕ್ಕೆ 24 ವರ್ಷದ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿರುವ ಆರೋಪಿ ನಾಗರಾಜ್ ಬಗ್ಗೆ ಪೊಲೀಸರಿಗೆ ಇದುವರೆಗೂ ಸುಳಿವು ಪತ್ತೆಯಾಗಿಲ್ಲ. ಆತನ ಪತ್ತೆಗೆ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿದೆ.
‘ಏಪ್ರಿಲ್ 28ರಂದು ಕೃತ್ಯ ಎಸಗಿದ್ದ ನಾಗರಾಜ್, ರಾಜ್ಯದಿಂದಲೇ ಪರಾರಿಯಾಗಿದ್ದಾನೆ. ಆತ ಎಲ್ಲಿದ್ದಾನೆ ಎಂಬ ಮಾಹಿತಿ ಲಭ್ಯವಾಗುತ್ತಿಲ್ಲ. ಆತನ ಪತ್ತೆಗಾಗಿ ವಿಶೇಷ ತಂಡಗಳು ತನಿಖೆ ಮುಂದುವರಿಸಿವೆ’ ಎಂದು ಪೊಲೀಸರು ಹೇಳಿದರು. ‘ಗಾಯಗೊಂಡಿರುವ ಯುವತಿ, ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದರು. ‘ಸಣ್ಣದೊಂದು ಗಾರ್ಮೆಂಟ್ಸ್ ಕಾರ್ಖಾನೆ ನಡೆಸುತ್ತಿದ್ದ ನಾಗರಾಜ್, ವ್ಯವಸ್ಥಿತವಾಗಿ ಸಂಚು ರೂಪಿಸಿಯೇ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ. ಕನ್ನಡ, ತಮಿಳು, ತೆಲುಗು ಹಾಗೂ ಇತರೆ ಭಾಷೆಯಲ್ಲೂ ಕರಪತ್ರ ಮುದ್ರಿಸಿ ಎಲ್ಲ ರಾಜ್ಯಗಳಿಗೂ ಕಳುಹಿಸಲಾಗಿದೆ. ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ’ ಎಂದೂ ಪೊಲೀಸರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.