ಬೆಂಗಳೂರು: ಎಸಿಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳವಾರ ನಡೆದ 13ನೇ ಪದವಿ ಪ್ರದಾನ ಸಮಾರಂಭದಲ್ಲಿ ವಿವಿಧ ಪದವಿ, ಸ್ನಾತಕೋತ್ತರ ಪದವಿ ಮತ್ತು ಪಿಎಚ್.ಡಿ ಪಡೆದ 270 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಎಸಿಎಸ್ ಎಂಜಿನಿಯರಿಂಗ್ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಎ.ಸಿ. ಷಣ್ಮುಗಂ ಮಾತನಾಡಿ, ‘ಶಿಕ್ಷಣದ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ವಿಯಾಗುವುದರ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು. ಶಿಕ್ಷಣವೆಂಬುದು ವಿದ್ಯಾರ್ಥಿಗಳು ಉದ್ಯೋಗ ಪಡೆದುಕೊಳ್ಳಲು ಮತ್ತು ಉತ್ತಮ ಜೀವನ ರೂಪಿಸಿಕೊಳ್ಳಲು ಇರುವ ಒಂದು ಸಾಧನವಾಗಿದೆ. ಎಂಜಿನಿಯರಿಂಗ್ ಪದವಿ ಸಮಸ್ಯೆಗಳನ್ನು ಬಗೆಹರಿಸುವುದರ ಜೊತೆಗೆ ಸಮುದಾಯಕ್ಕೂ ಕೊಡುಗೆ ನೀಡುವಂತಾಗಬೇಕು ಎಂದು ಸಲಹೆ ನೀಡಿದರು.

ಬಾಹ್ಯಾಕಾಶ ಇಲಾಖೆಯ ನಿರ್ದೇಶಕ ವಿನೋದ್ ಕುಮಾರ್, ನಟಿ ಅಮೃತಾ ಪ್ರೇಮ್, ಕಾಲೇಜಿನ ಪ್ರಾಂಶುಪಾಲ ಆನಂದತೀರ್ಥ ಬಿ.ಗುಡಿ, ಎ.ಸಿ.ಎಸ್ ಅರುಣ್ ಕುಮಾರ್, ಲಲಿತಾ ಲಕ್ಷ್ಮಿ, ಎಸ್. ವಿಜಯಾನಂದ್, ನಿವೃತ್ತ ಐಎಎಸ್ ಅಧಿಕಾರಿ ಸಿ.ಎನ್. ಸೀತಾರಾಮ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.