ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಡಿಯುವ ನೀರು ಕಲುಷಿತಗೊಂಡರೆ ಅಧಿಕಾರಿಗಳ ವಿರುದ್ಧ ಕ್ರಮ: ಪ್ರಿಯಾಂಕ್‌ ಎಚ್ಚರಿಕೆ

Published 29 ಮೇ 2024, 18:07 IST
Last Updated 29 ಮೇ 2024, 18:07 IST
ಅಕ್ಷರ ಗಾತ್ರ

ಬೆಂಗಳೂರು: ‘ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣಗಳು ಪುನಾರಾವರ್ತನೆಯಾದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ‌ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ಗಳಿಗೆ ಈ ಬಗ್ಗೆ ಪತ್ರ ಬರೆದಿರುವ ಸಚಿವರು, ‘ಕೆಲವು ಜಿಲ್ಲೆಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿದ್ದು, ಪ್ರಾಣಹಾನಿ ಕೂಡಾ ಸಂಭವಿಸಿದೆ. ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ತಕ್ಷಣ‌ ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಸೂಚಿಸಿದ್ದಾರೆ.

‘ನೀರು ಸರಬರಾಜು ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಕಾಲ ಕಾಲಕ್ಕೆ ಮೇಲ್ವಿಚಾರಣೆ ನಡೆಸಲು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು. ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಕರಣಗಳು ಪುನಾರಾವರ್ತನೆಯಾದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು’ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT