ಬೆಂಗಳೂರು: ಹೊಸಕೋಟೆ ಮತ್ತು ನೆಲಮಂಗಲದ ಬಳಿ ಇತ್ತೀಚೆಗೆ ಸಂಭವಿಸಿದ ಅಪಘಾತದ ಹಿನ್ನೆಲೆಯಲ್ಲಿ ವಾಹನ ಚಾಲನೆ ಮಾಡುವ ಅಪ್ರಾಪ್ತ ವಯಸ್ಸಿನವರು ಹಾಗೂ ವಾಹನ ನೀಡುವ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮಿಷನರ್
ಸೀಮಾಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

‘ಕಳೆದ ವರ್ಷ (2025) ನಿಯಮ ಉಲ್ಲಂಘಿಸಿ ವಾಹನ ಚಾಲನೆ ಮಾಡಿದ ಅಪ್ರಾಪ್ತ ವಯಸ್ಸಿನವರ ವಿರುದ್ಧ 414 ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ. ಮಕ್ಕಳಿಗೆ ವಾಹನ ನೀಡುತ್ತಿರುವ ಪರಿಣಾಮ ರಸ್ತೆ ಅಪಘಾತಗಳು ಸಂಭವಿಸಿ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ನಗರ ಸಂಚಾರ ಪೊಲೀಸರು ಇನ್ನು ಮುಂದೆ ವಿಶೇಷ ಕಾರ್ಯಾಚರಣೆ ನಡೆಸಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದಾರೆ. ಮಕ್ಕಳಿಗೆ ಬೈಕ್ ಹಾಗೂ ಕಾರು ಚಾಲನೆಗೆ ಅವಕಾಶ ಕಲ್ಪಿಸಿಕೊಟ್ಟವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಜೈಲಿಗೆ ಕಳುಹಿಸಲಾಗುವುದು’ ಎಂದು ತಿಳಿಸಿದರು.

ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಕಾರ್ತಿಕ್ ರೆಡ್ಡಿ ಮಾತನಾಡಿ, ‘ಅಪ್ರಾಪ್ತ ವಯಸ್ಸಿನವರು ವಾಹನ ಚಾಲನೆ ಮಾಡುವುದರಿಂದ ಸಂಚಾರ ನಿಯಮ ಉಲ್ಲಂಘನೆಯಾಗುತ್ತದೆ. ಈ ಬಗ್ಗೆ ಅರಿವು ಮೂಡಿಸುತ್ತಿದ್ದರೂ ವಾಹನಗಳನ್ನು ಚಾಲನೆ ಮಾಡುತ್ತಿರುವುದು ಕಂಡು ಬರುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಅಲ್ಲದೇ, ನಗರದಲ್ಲಿ ಹೆಚ್ಚಾಗಿ ಅಪ್ರಾಪ್ತ ವಯಸ್ಸಿನವರು ವ್ಹೀಲಿ ಮಾಡುತ್ತಿರುವುದು ಕಂಡು ಬರುತ್ತಿದ್ದು, ಅವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ವ್ಹೀಲಿ ಪ್ರಕರಣಗಳಲ್ಲಿ ಕಳೆದ ವರ್ಷ 159 ಅಪ್ರಾಪ್ತ ವಯಸ್ಸಿನವರು ಹಾಗೂ ಪೋಷಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

60 ಲಕ್ಷ ಮೌಲ್ಯದ ಸಾಮಗ್ರಿ ಕೊಡುಗೆ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಸಂಚಾರ ನಿಯಮ ಉಲ್ಲಂಘನೆ ನಿಯಂತ್ರಣಕ್ಕೆ ಗ್ಲೋಬಲ್ ರೋಡ್ ಸೇಫ್ಟಿ ಖಾಸಗಿ ಸಂಸ್ಥೆಯು ಸುಮಾರು ₹60 ಲಕ್ಷ ವೆಚ್ಚದ ಸಾಮಗ್ರಿಗಳನ್ನು ಸಂಚಾರ ವಿಭಾಗಕ್ಕೆ ನೀಡಿತು.

ಆಲ್ಕೋಮಿಟರ್, ಬಂದೂಕು, ರಾಡಾರ್ ಗನ್, ಲೇಸರ್ ಗನ್, ಕ್ಯಾಮೆರಾ, ಪಿಡಿಎ ಯಂತ್ರ, ಪ್ರಿಂಟರ್, ಎಎನ್ಪಿಆರ್ ಕ್ಯಾಮೆರಾ, ಲೈಟ್ ಬ್ಯಾಟಲ್, ರಂಬಲ್ ಪಟ್ಟಿ, ವೈಯರ್ಲೆಸ್ ರೆಡಿಯೊ ಸೆಟ್ ಸೇರಿ ಇತರೆ ಉಪಯುಕ್ತ ಸಾಮಗ್ರಿಗಳನ್ನು ನೀಡಲಾಯಿತು.

ಐ.ಎಂ.ವಿ ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣ ವಿವರ

ವರ್ಷ; ಅಪ್ರಾಪ್ತ ವಯಸ್ಕರ ವಿರುದ್ಧ ಪ್ರಕರಣ
2023;95
2024;197
2025;414

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.