ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಮತಿ ಇಲ್ಲದೆ ಕೊಳವೆಬಾವಿ ಕೊರೆದರೆ ಕ್ರಮ: ಜಲಮಂಡಳಿ ಅಧ್ಯಕ್ಷ

Published 10 ಮಾರ್ಚ್ 2024, 15:35 IST
Last Updated 10 ಮಾರ್ಚ್ 2024, 15:35 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಅನುಮತಿ ಇಲ್ಲದೆ ಕೊಳವೆಬಾವಿಗಳನ್ನು ಕೊರೆದರೆ, ಮಾಲೀಕರು ಹಾಗೂ ಕೊರೆಯುವ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

ಮಳೆಯ ಕೊರತೆಯಿಂದ ಅಂತರ್ಜಲ ಮಟ್ಟ ಕುಸಿದಿದ್ದು, ಸಾಕಷ್ಟು ಕೊಳವೆಬಾವಿಗಳು ಬತ್ತಿ ಹೋಗಿವೆ. ವೈಯಕ್ತಿಕ ಅಥವಾ ಇನ್ನಿತರೆ ಬಳಕೆಗೆ ಕೊಳವೆಬಾವಿಗಳನ್ನು ಕೊರೆಯುವ ಮುನ್ನ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆ ವಿನಿಯಮ ಹಾಗೂ ನಿಯಂತ್ರಣ) ಕಾಯ್ದೆಯಂತೆ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಅವೈಜ್ಞಾನಿಕವಾಗಿ ಕೊಳವೆಬಾವಿಗಳನ್ನು ಕೊರೆಯುತ್ತಿರುವುದು ಮತ್ತು ಅನುಮತಿ ಪಡೆಯದೆ ಕೊಳವೆಬಾವಿ ಕೊರೆಯುತ್ತಿರುವುದರಿಂದ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಅನುಮತಿ ಪಡೆಯದೇ ಇದ್ದರೆ ಕಾಯ್ದೆಯಂತೆ ರಿಗ್‌ ಪಡೆಯಲು ನೀಡಿರುವ ಅನುಮತಿಯನ್ನು ರದ್ದುಪಡಿಸಿ, ಕಾನೂನುಕ್ರಮ ಕೈಗೊಳ್ಳಲಾಗುತ್ತದೆ. ಕೊಳವೆಬಾವಿ ಕೊರೆಸುವ ಮಾಲೀಕರ ವಿರುದ್ಧ ನಿಯಮ ಉಲ್ಲಂಘನೆ ದೂರು ದಾಖಲಿಸಿ, ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್‌ ಪ್ರಸಾತ್‌ ಮನೋಹರ್‌ ಆದೇಶದಲ್ಲಿ ತಿಳಿಸಿದ್ದಾರೆ.

ಮಾರ್ಚ್‌ 15ರಿಂದ ಈ ಆದೇಶ ಜಾರಿಗೆ ಬರಲಿದ್ದು, ಅಂದಿನಿಂದ ಕೊಳವೆಬಾವಿ ಕೊರೆಯಲು ಅನುಮತಿಗಾಗಿ ಅರ್ಜಿ ಸಲ್ಲಿಸಬಹುದು. ಅಗತ್ಯ ಹಾಗೂ ತಜ್ಞರ ವರದಿ ಆಧರಿಸಿ, ಸಂಬಂಧಪ‍ಟ್ಟವರಿಂದ ಸ್ಥಳ ಪರಿಶೀಲಿಸಿ ನಿಯಮಾನುಸಾರ ಅನುಮತಿ ನೀಡಲಾಗುವುದು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT