ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಪಾರ್ಸಿ ಜನಸಂಖ್ಯೆ ಹೆಚ್ಚಳಕ್ಕೆ ಕ್ರಮ’

Last Updated 18 ಫೆಬ್ರುವರಿ 2021, 22:05 IST
ಅಕ್ಷರ ಗಾತ್ರ

ಬೆಂಗಳೂರು: ಪಾರ್ಸಿ ಸಮುದಾಯದ ಜನಸಂಖ್ಯೆ ದಿನೇ ದಿನೇ ಕಡಿಮೆ ಆಗುತ್ತಿರುವುದರಿಂದ ಆ ಸಮುದಾಯದ ಜನಸಂಖ್ಯೆ ಪ್ರಮಾಣ ಹೆಚ್ಚಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ ಹೇಳಿದರು.

ಈ ಸಂಬಂಧ ಕೇಂದ್ರ ಸರ್ಕಾರ ಯೋಜನೆ ರೂಪಿಸುತ್ತಿದೆ. ಕೇಂದ್ರದ ಮಾರ್ಗಸೂಚಿ ಬಂದ ಬಳಿಕ ರಾಜ್ಯದಲ್ಲೂ ಜಾರಿಗೆ ತರಲಾಗುತ್ತದೆ. ರಾಜ್ಯದಲ್ಲಿ ಪಾರ್ಸಿ ಸಮುದಾಯದ ಜಸಂಖ್ಯೆ ಒಂದು ಸಾವಿರ ಇದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೇಂದ್ರ ಸರ್ಕಾರ ಈ ವಿಷಯವನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಿದೆ. ಆಹಾರ ಕ್ರಮ, ವೈವಾಹಿಕ ಪದ್ಧತಿ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಪಾರ್ಸಿಗಳ ಸಂಖ್ಯೆ ಅಳಿವಿನಂಚಿಗೆ ಬಂದಿದೆ. ಆ ಸಮುದಾಯದ ಸಂಖ್ಯೆ ಹೆಚ್ಚಿಸಲು ವೈಜ್ಞಾನಿಕವಾಗಿ ಸಲಹೆ ಸೂಚನೆಗಳನ್ನು ಪಡೆದು ಕ್ರಮ ತೆಗೆದುಕೊಳ್ಳಲಾಗುವುದು. ಇದಕ್ಕೆ ತಜ್ಞರ ನೆರವು ಪಡೆಯಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT