ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಪ್ಮಾ ಬಲಪಡಿಸಲು ಕ್ರಮ: ಮೋಹನ್‌ ಆಳ್ವ

Published : 1 ಸೆಪ್ಟೆಂಬರ್ 2024, 16:13 IST
Last Updated : 1 ಸೆಪ್ಟೆಂಬರ್ 2024, 16:13 IST
ಫಾಲೋ ಮಾಡಿ
Comments

ಬೆಂಗಳೂರು: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘಕ್ಕೆ (ಕುಪ್ಮಾ) ಹೆಚ್ಚಿನ ಸದಸ್ಯರನ್ನು ಸೇರ್ಪಡೆಗೊಳಿಸುವ ಮೂಲಕ ಕಾರ್ಯಕಾರಣಿ ಸಮಿತಿಯನ್ನು ರಾಜ್ಯದಾದ್ಯಂತ ಬಲಪಡಿಸಲಾಗುತ್ತಿದೆ ಎಂದು ಕುಪ್ಮಾ ಅಧ್ಯಕ್ಷ ಎಂ. ಮೋಹನ ಆಳ್ವ ತಿಳಿಸಿದರು.

ನಗರದಲ್ಲಿ ಭಾನುವಾರ ನಡೆದ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ 2023–24ರ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ಕುಪ್ಮಾಕ್ಕೆ ಸದಸ್ಯರನ್ನು ಸೇರ್ಪಡೆಗೊಳಿಸಲು ಮತ್ತು ನೂತನ ಯೋಜನೆಗಳನ್ನು ಜಾರಿಗೊಳಿಸಲು ಕೇಂದ್ರ ಸಮಿತಿಯು ಕೆಲಸ ಮಾಡುತ್ತಿದೆ. ಕುಪ್ಮಾದ ಸಮಸ್ಯೆಗಳನ್ನು ಸುಲಲಿತವಾಗಿ ಬಗೆಹರಿಸಿಕೊಳ್ಳಲು ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ ಕೆಲಸ ಮಾಡಲಾಗುತ್ತಿದೆ. ಖಾಸಗಿ ಪದವಿ ಪೂರ್ವ ಕಾಲೇಜುಗಳ ಸಮಸ್ಯೆಗಳನ್ನು ಸರ್ಕಾರವು ತಕ್ಷಣ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಸಂಘದ ಕಾರ್ಯದರ್ಶಿ ನರೇಂದ್ರ ಎಲ್. ನಾಯಕ್, ಕುಪ್ಮಾದ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಕೀರ್ತನ್ ಕುಮಾರ್, ಬೆಂಗಳೂರು ಘಟಕದ ಕಾರ್ಯದರ್ಶಿ ದೇವರಾಜ್ ಬಿ.ಕೆ., ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಜಯರಾಮ್ ಶೆಟ್ಟಿ, ಬೇರೆ ಬೇರೆ ಜಿಲ್ಲೆಗಳ ಸದಸ್ಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT