ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ಚೇತನ್ ಜಾಮೀನು ಮೇಲೆ ಬಿಡುಗಡೆ

Last Updated 28 ಫೆಬ್ರುವರಿ 2022, 16:38 IST
ಅಕ್ಷರ ಗಾತ್ರ

ಬೆಂಗಳೂರು: 'ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಬರಹ ಪ್ರಕಟಿಸಿದ್ದಾರೆ’ ಎಂಬ ಆರೋಪದಡಿ ಬಂಧಿಸಲಾಗಿದ್ದ ನಟ ಎ. ಚೇತನ್ ಕುಮಾರ್ ಅವರು ಜಾಮೀನು ಮೇಲೆ ಸೋಮವಾರ ಸಂಜೆ ಬಿಡುಗಡೆ ಆಗಿದ್ದಾರೆ.

ಫೆ. 22ರಂದು ಚೇತನ್ ಅವರನ್ನು ಶೇಷಾದ್ರಿಪುರ ಪೊಲೀಸರು ಬಂಧಿಸಿದ್ದರು. 14 ದಿನಗಳವರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅವರಿದ್ದರು.

8ನೇ ಎಸಿಎಂಎಂ ನ್ಯಾಯಾಲಯ, ಚೇತನ್ ಅವರಿಗೆ ಜಾಮೀನು ಮಂಜೂರು ಮಾಡಿ ಫೆ. 25ರಂದು ಆದೇಶ ಹೊರಡಿಸಿತ್ತು. ಆದರೆ, ಜಾಮೀನಿನ ಷರತ್ತುಗಳನ್ನು ಪೂರೈಸಲು ಶುಕ್ರವಾರ ಸಾಧ್ಯವಾಗಿರಲಿಲ್ಲ. ಹೀಗಾಗಿ, ಸೋಮವಾರ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ನಂತರವೇ ಚೇತನ್ ಜೈಲಿನಿಂದ ಬಿಡುಗಡೆಗೊಂಡರು.

‘ಜಾತಿ, ಧರ್ಮ ಹಾಗೂ ಎರಡು ಗುಂಪಿನ ನಡುವೆ ದ್ವೇಷ ಉಂಟು ಮಾಡುವ ಹೇಳಿಕೆ ಪ್ರಚುರಪಡಿಸಿದ (ಐಪಿಸಿ 505 (2) ಹಾಗೂ ಅಪರಾಧ ಕೃತ್ಯ ಕೈಗೊಳ್ಳಲು ಪ್ರಚೋದನೆ (ಐಪಿಸಿ 504) ನೀಡಿದ್ದಾರೆ’ ಎಂಬ ಆರೋಪದಡಿ ಚೇತನ್ ವಿರುದ್ಧ ಶೇಷಾದ್ರಿಪುರ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT