ಶನಿವಾರ, ಜುಲೈ 24, 2021
26 °C

ಬ್ರಾಹ್ಮಣ್ಯದ ಅವಹೇಳನ: ಹೇಳಿಕೆಯಿಂದ ಹಿಂದೆ ಸರಿಯುವುದಿಲ್ಲ ಎಂದ ನಟ ಚೇತನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನನ್ನ ಹೋರಾಟ ಭೇದ–ಭಾವ, ಅಸಮಾನತೆಗಳ ವಿರುದ್ಧವೇ ಹೊರತು ಯಾವುದೇ ಜಾತಿ, ಜನಾಂಗದ ವಿರುದ್ಧವಲ್ಲ. ನನ್ನ ಹೇಳಿಕೆಯಿಂದ ಹಿಂದೆ ಸರಿಯುವುದಿಲ್ಲ’ ಎಂದು ನಟ ಚೇತನ್ ತಿಳಿಸಿದರು.

ಬ್ರಾಹ್ಮಣ್ಯದ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಪ್ರಕರಣ ಸಂಬಂಧ ಬಸವನಗುಡಿ ಠಾಣೆಯಲ್ಲಿ ಬುಧವಾರ ವಿಚಾರಣೆಗೆ ಅವರು ಹಾಜರಾದರು.

ವಿಪ್ರ ಯುವ ವೇದಿಕೆ ಅಧ್ಯಕ್ಷ ಪವನ್‌ ಕುಮಾರ್ ಶರ್ಮಾ ಎಂಬುವರು ನೀಡಿದ್ದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಪೊಲೀಸರು, ವಿಚಾರಣೆಗೆ ಬರುವಂತೆ ಚೇತನ್‌ ಅವರಿಗೆ ನೋಟಿಸ್ ನೀಡಿದ್ದರು.

ವಿಚಾರಣೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದೆ. ನಾನು ಜಾತಿಯ ವಿರುದ್ಧ ಹೋರಾಟ ನಡೆಸುತ್ತಿಲ್ಲ. ಹುಟ್ಟಿದ ತಕ್ಷಣವೇ ಶ್ರೇಷ್ಠ ಹಾಗೂ ಕನಿಷ್ಠ ಎನ್ನುವ ಮನಸ್ಥಿತಿ ಹಾಗೂ ವ್ಯವಸ್ಥೆಯ ವಿರುದ್ಧ ಹೋರಾಟ ಮುಂದುವರಿಯಲಿದೆ. ಪ್ರಕರಣದ ತನಿಖೆಗೆ ಸಹಕರಿಸುತ್ತೇನೆ’ ಎಂದೂ ಹೇಳಿದರು.

ಇದನ್ನೂ ಓದಿ... ಬ್ರಾಹ್ಮಣ್ಯದ ಅವಹೇಳನ; ನಟ ಚೇತನ್ ವಿರುದ್ಧ ಎಫ್‌ಐಆರ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು