ಬೆಂಗಳೂರು: ಅವಹೇಳನಕಾರಿ ಟ್ವೀಟ್ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ನಟ ಚೇತನ್ ಅವರನ್ನು ಶೇಷಾದ್ರಿಪುರ ಪೊಲೀಸರು ಮಂಗಳವಾರ ಬೆಳಿಗ್ಗೆ ಬಂಧಿಸಿದ್ದರು.
ಸದ್ಯ ಚೇತನ್ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿರುವ ನಗರದ 32ನೇ ಎಸಿಎಂಎಂ ಕೋರ್ಟ್ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
'ಉರಿಗೌಡ–ನಂಜೇಗೌಡ ವಿಚಾರದಲ್ಲಿ ಹಿಂದೂ ಧರ್ಮದ ಬಗ್ಗೆ ನಟ ಚೇತನ್ ಇತ್ತೀಚೆಗೆ ಟ್ವೀಟ್ ಮಾಡಿದ್ದರು. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ ಎಂಬುದಾಗಿ ಶಿವಕುಮಾರ್ ಎಂಬುವವರು ದೂರು ನೀಡಿದ್ದರು' ಎಂದು ಪೊಲೀಸ್ ಅಧಿಕಾರಿಯೊಬ್ಬರು 'ಪ್ರಜಾವಾಣಿ'ಗೆ ತಿಳಿಸಿದರು.
'ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು. ಮಂಗಳವಾರ ಬೆಳಿಗ್ಗೆ ಮನೆಯಲ್ಲಿ ಚೇತನ್ ಅವರನ್ನು ಬಂಧಿಸಲಾಗಿದೆ" ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.