ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ದರ್ಶನ್ ಬಂಧನ | ತನಿಖೆ ಆಗುವವರೆಗೆ ಏನನ್ನೂ ಹೇಳಲಾಗುವುದಿಲ್ಲ: ಜಿ. ಪರಮೇಶ್ವರ

Published 11 ಜೂನ್ 2024, 7:58 IST
Last Updated 11 ಜೂನ್ 2024, 7:58 IST
ಅಕ್ಷರ ಗಾತ್ರ

ಬೆಂಗಳೂರು: 'ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಎಂಬ ಮಾಹಿತಿ ಇದೆ. ಅದರ ಮೇಲೆ ತನಿಖೆ ಆಗುವವರೆಗೂ ಏನೂ ಹೇಳಲು ಆಗುವುದಿಲ್ಲ' ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

'ಈ ಪ್ರಕರಣದಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿದ್ದಾರೆಯೇ? ಇಲ್ಲವೇ? ಯಾವ ಕಾರಣಕ್ಕೆ ಕೊಲೆ ಆಗಿದೆ. ದರ್ಶನ್ ಹೆಸರು ಯಾಕೆ ಬಂದಿದೆ ಎನ್ನುವುದು ತನಿಖೆ ನಂತರ ಗೊತ್ತಾಗಲಿದೆ. ಸದ್ಯ ಬೇರೆ ಏನು ಹೇಳಲು ಸಾಧ್ಯವಿಲ್ಲ. ತನಿಖೆ ಆದಮೇಲೆ ಎಲ್ಲವೂ ಗೊತ್ತಾಗಲಿದೆ. ಅದಕ್ಕೂ ಮೊದಲು ಏನು ಹೇಳಲು ಸಾಧ್ಯವಿಲ್ಲ' ಎಂದೂ ಹೇಳಿದರು.

'ಸೋಶಿಯಲ್ ಮೀಡಿಯಾ ಕಾಮೆಂಟ್ ಬಗ್ಗೆ ಗೊತ್ತಿಲ್ಲ. ಮೈಸೂರಿನಲ್ಲಿ ಬಂಧನ ಆಗಿದೆ. ಪೊಲೀಸರು ದರ್ಶನ್ ಅವರನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT