ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಚ್ಛೇದನ ಕೋರಿದ್ದ ನಟ ದುನಿಯಾ ವಿಜಯ್ ಅರ್ಜಿ ವಜಾ

Published 14 ಜೂನ್ 2024, 19:30 IST
Last Updated 14 ಜೂನ್ 2024, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪತ್ನಿ ನಾಗರತ್ನಾ ಅವರಿಂದ ವಿಚ್ಛೇದನ ಕೋರಿ ನಟ ದುನಿಯಾ ವಿಜಯ್
ಸಲ್ಲಿಸಿದ್ದ ಅರ್ಜಿಯನ್ನು ನಗರದ ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ.

ಈ ಸಂಬಂಧ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು 1ನೇ ಪ್ರಧಾನ ಕೌಟುಂಬಿಕ ನ್ಯಾಯಾಲಯ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

‘ಅರ್ಜಿಯಲ್ಲಿ ಪತ್ನಿ ವಿರುದ್ಧ ಮಾಡಿರುವ ಆರೋಪಗಳನ್ನು ಸಾಬೀತುಪಡಿಸುವಲ್ಲಿ ದುನಿಯಾ ವಿಜಯ್‌ ವಿಫಲವಾಗಿದ್ದಾರೆ. ಆದ್ದರಿಂದ, ಇವರ ವಿವಾಹ ರದ್ದುಪಡಿಸಿ ವಿಚ್ಛೇದನ ಮಂಜೂರು ಮಾಡಲು ಆಗದು’ ಎಂದು ನ್ಯಾಯಾಧೀಶರು ಅರ್ಜಿಯನ್ನು ವಜಾಗೊಳಿಸಿದ್ದಾರೆ.

‘ಕ್ರೌರ್ಯದ ಆಧಾರದಡಿ ಪತ್ನಿ ನಾಗರತ್ನಾ ಅವರ ಜೊತೆಗಿನ ತಮ್ಮ ವಿವಾಹವನ್ನು ಅನೂರ್ಜಿತಗೊಳಿಸಿ ವಿಚ್ಛೇದನ ಮಂಜೂರು ಮಾಡಬೇಕು’ ಎಂದು ದುನಿಯಾ ವಿಜಯ್‌ ಕೋರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT