ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ಈ ಬಾರಿ ಮೂವರಿಗೆಗೌರವಡಾಕ್ಟರೇಟ್ ನೀಡಲು ನಿರ್ಧರಿಸಿದೆ.
ಚಿತ್ರನಟ ಬಿ.ಎಸ್. ದ್ವಾರಕೀಶ್, ಕಲಾವಿದ ಡಾ.ಟಿ. ಅನಿಲ್ ಕುಮಾರ್ ಮತ್ತು ಅಮೆರಿಕದ ಕನ್ನಡ ಕೂಟಗಳ ಸಂಘಟನೆ (ಅಕ್ಕ) ಅಧ್ಯಕ್ಷ ಅಮರನಾಥ್ ಗೌಡ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ನಿರ್ಧರಿಸಲಾಗಿದೆ.
ಡಿ.5ರಂದು ನಡೆಯಲಿರುವ ವಿಶ್ವವಿದ್ಯಾಲಯದ 57ನೇ ವಾರ್ಷಿಕ ಘಟಿಕೋತ್ಸವದಲ್ಲಿಗೌರವಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಯುಜಿಸಿ ಮುಖ್ಯಸ್ಥ ಪ್ರೊ. ಎಂ. ಜಗದೇಶ್ ಕುಮಾರ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.