ಡಾ. ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು - ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ –
– ಕಿಚ್ಚ ಸುದೀಪ್, ನಟ
ನಟ ಕನ್ನಡ ಚಿತ್ರರಂಗದ ಮೇರು ನಟರಾದ ಡಾ. ವಿಷ್ಣು ಸರ್ ಪುಣ್ಯಭೂಮಿಗೆ ರಾಜಧಾನಿಯಲ್ಲಿ ಅಂಗೈಯಗಲ ಜಾಗವಿಲ್ಲವೆಂಬುದನ್ನು ಯಾಕೋ ಅರಗಿಸಿಕೊಳ್ಳಲಾಗುತ್ತಿಲ್ಲ. ಸರ್ಕಾರ ಕೂಡಲೇ ಡಾ. ವಿಷ್ಣು ಸರ್ ಪುಣ್ಯಭೂಮಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುವೆ. ಅವರ ಅಭಿಮಾನಿಗಳ ಹೋರಾಟದಲ್ಲಿ ನಾನೂ ಇದ್ದೇನೆ. ಈ ವಿಷಯ ಬೇಗ ಸುಖಾಂತ್ಯ ಕಾಣಲಿ
- ಡಾಲಿ ಧನಂಜಯ, ನಟ
ನಟ ಡಾ. ವಿಷ್ಣು ಸರ್ ಸಮಾಧಿಗಾಗಿ ಇಷ್ಟೊಂದು ಹೋರಾಟ ಮಾಡಬೇಕಾಗಿರುವುದು ಬೇಸರದ ವಿಷಯ. ಇದು ಬರೀ ಸಮಾಧಿಯ ವಿಷಯವಲ್ಲ. ಎಲ್ಲ ಅಭಿಮಾನಿಗಳಿಗಾಗುವ ನೋವು. ಬೇಗ ಸರ್ಕಾರ ಇದನ್ನು ಬಗೆಹರಿಸಲಿ –
– ನೀನಾಸಂ ಸತೀಶ್, ನಟ
ನಟ ಕನ್ನಡದ ಅಭಿಜಾತ ಕಲಾವಿದ ಡಾ. ವಿಷ್ಣುವರ್ಧನ್ ಅವರ ಅಂತ್ಯ ಸಂಸ್ಕಾರಗೊಂಡ ಸ್ಥಳ ಪುಣ್ಯಭೂಮಿ ಆಗಬೇಕೆಂಬುದು ಕನ್ನಡಿಗರ ಅಪೇಕ್ಷೆಯ ಸಂಕೇತವಾಗಿದೆ. ಸರ್ಕಾರ ಸಕಾರಾತ್ಮಕವಾಗಿ ಮನಸ್ಸು ಮಾಡಿದರೆ ಈ ಬೇಡಿಕೆ ಈಡೇರಿಸುವುದು ದೊಡ್ಡ ವಿಷಯವೇನಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸುವಂತೆ ಒತ್ತಾಯಿಸುತ್ತೇನೆ –