ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಿ ಹೇಮಾ ಚೌಧರಿಗೆ ಶಸ್ತ್ರಚಿಕಿತ್ಸೆ

Published 21 ಡಿಸೆಂಬರ್ 2023, 6:20 IST
Last Updated 21 ಡಿಸೆಂಬರ್ 2023, 6:20 IST
ಅಕ್ಷರ ಗಾತ್ರ

ಬೆಂಗಳೂರು: ಖ್ಯಾತ ಚಿತ್ರನಟಿ ಹೇಮಾ ಚೌಧರಿ ಅವರು ಜಯನಗರದ ಅಪೊಲೊ ಆಸ್ಪತ್ರೆಯಲ್ಲಿ ಬುಧವಾರ ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದರು.

ಎರಡು ದಿನಗಳ ಹಿಂದೆ ಹೇಮಾ ಚೌಧರಿ ಅವರಿಗೆ ಬ್ರೈನ್ ಹ್ಯಾಮರೇಜ್‌ ಆಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು ಎಂದು ಕುಟುಂಬದ ಮೂಲಗಳು ಹೇಳಿವೆ. ಕೆಲ ಕಾಲ ಅವರು ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸದೇ ಇದಿದ್ದು ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು.

ಹೇಮಾ ಅವರ ಪುತ್ರ ಐರ್ಲೆಂಡ್‌ನಲ್ಲಿದ್ದು, ಬುಧವಾರ ಸಂಜೆ ವೇಳೆಗೆ ಆಸ್ಪತ್ರೆಗೆ ಆಗಮಿಸಿ ತಾಯಿಯ ಯೋಗಕ್ಷೇಮ ವಿಚಾರಿಸಿದರು.

70ರ ದಶಕದಲ್ಲೇ ಚಿತ್ರರಂಗಕ್ಕೆ ಕಾಲಿಟ್ಟ ಹೇಮಾ ಕನ್ನಡ, ತೆಲುಗು, ತಮಿಳು, ಮಲಯಾಳ ಸಿನಿಮಾಗಳಲ್ಲಿ ನಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT