ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಹಾಗೂ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಕೆ.ಆರ್.ಪುರದ ನಿವಾಸಿ ಪ್ರಮೋದ್ಗೌಡ (20) ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಪ್ರಮೋದ್ಗೌಡ ಮೊದಲ ಆರೋಪಿ.

ತನ್ನ ಸ್ನೇಹಿತನ ಮೊಬೈಲ್ನಿಂದ ಇನ್ಸ್ಟಾಗ್ರಾಂ ಖಾತೆ ತೆರೆದು ರಮ್ಯಾ ಅವರ ಇನ್ಸ್ಟಾಗ್ರಾಂ ಖಾತೆಗೆ ಅಶ್ಲೀಲ ಹಾಗೂ ಬೆದರಿಕೆ ಸಂದೇಶ ಕಳುಹಿಸಿದ್ದ. ಪ್ರಮೋದ್ ಗೌಡ– 87 ಎಂಬ ಖಾತೆಯಿಂದ ಸಂದೇಶ ಕಳುಹಿಸಿದ್ದ. ಗುರುವಾರ ರಾತ್ರಿ ಪ್ರಮೋದ್ ಗೌಡನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಈ ಪ್ರಕರಣದಲ್ಲಿ ಇದುವರೆಗೂ ಭುವನ್ಗೌಡ, ರಾಜೇಶ್, ಟಿ.ಓಬಣ್ಣ, ಗಂಗಾಧರ ಹಾಗೂ ಕೊಪ್ಪಳದ ಮಂಜುನಾಥ್ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಮ್ಯಾ ಅವರು ಜುಲೈ 28ರಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು. ಆ ದೂರು ಆಧರಿಸಿ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

‘43 ಖಾತೆಗಳಿಂದ ಬೆದರಿಕೆ ಸಂದೇಶಗಳು ಬಂದಿರುವುದಾಗಿ ಉಲ್ಲೇಖಿಸಿ ರಮ್ಯಾ ಅವರು ದೂರು ನೀಡಿದ್ದರು. ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.